Uncategorizedಮೈಸೂರು

ವಿದ್ಯಾರ್ಥಿ ದೆಸೆಯಿಂದಲೇ ಉತ್ತಮ ಹವ್ಯಾಸ ಬೆಳೆಸಿಕೊಳ್ಳಿ: ಹೇಮಲತಾ

ಮೈಸೂರು, ಮೇ 10: ಬಿ.ಎನ್ ರಸ್ತೆಯಲ್ಲಿರುವ ಜೆಎಸ್ಎಸ್ ಕಲಾ ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನ ಸ್ನಾತಕೋತರ ವಿದ್ಯಾರ್ಥಿ ವೇದಿಕೆಗಳ ಸಮಾರೋಪ ಸಮಾರಂಭವನ್ನು ಬುಧವಾರ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜು ಶಿಕ್ಷಣ ವಿಭಾಗದ ನಿರ್ದೇಶಕ ಪ್ರೊ.ಟಿ.ಡಿ.ಸುಬ್ಬಣ್ಣ ವಹಿಸಿದ್ದರು. ಈ ವೇಳೆ ಮಾತನಾಡಿದ ಅಂತಾರಾಷ್ಟ್ರೀಯ ವಾಲಿಬಾಲ್ ಕ್ರೀಡಾಪಟು ಹೇಮಲತಾ ಹೆಚ್.ಎನ್, ವಿದ್ಯಾರ್ಥಿಗಳೆ ದೇಶದ ಭವಿಷ್ಯವಾದ್ದರಿಂದ ಪ್ರತಿಯೊಬ್ಬರು ಉತ್ತಮ ಶಿಕ್ಷಣ ಪಡೆದುಕೊಳ್ಳಬೇಕು. ವಿದ್ಯಾರ್ಥಿ ದೆಸೆಯಿಂದಲೇ ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಂಡು ವ್ಯಕ್ತಿತ್ವ ರೂಪಿಸಿಕೊಳ್ಳಬೇಕು. ಕೇವಲ ಪಠ್ಯಕ್ಕೆ ಸೀಮಿತವಾಗದೆ ಕ್ರೀಡಾಭಿರುಚಿ ಬೆಳೆಸಿಕೊಂಡು ಜೀವನದಲ್ಲಿ ಏನಾದರು ಸಾಧನೆ ಮಾಡಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಮುಖ್ಯ ಕಾರ್ಯನಿರ್ವಾಹಕ ಪ್ರೊ.ಬಿ.ಎ.ಸಾಂಬಶಿವಯ್ಯ, ಪ್ರಾಂಶುಪಾಲ ಮಹದೇವಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. (ವರದಿ ಬಿ.ಎಂ)

Leave a Reply

comments

Related Articles

error: