ಮೈಸೂರು

ಮತ್ಸ್ಯದರ್ಶಿನಿಗೆ ಭೇಟಿ ನೀಡಿದ ಪ್ರಮೋದ್ ಮಧ್ವರಾಜ್

ಮೈಸೂರಿನ ಕುಕ್ಕರಹಳ್ಳಿಯಲ್ಲಿರುವ ಮತ್ಸ್ಯದರ್ಶಿನಿಗೆ ಮೀನುಗಾರಿಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಭಾನುವಾರ ಭೇಟಿ ನೀಡಿದರು.

ಮೈಸೂರಿನ ದಸರಾ ಉತ್ಸವದ ಕ್ರೀಡಾ ದಸರಾ ಕಾರ್ಯಕ್ರಮವನ್ನು ಉದ್ಘಾಟಿಸಲು ಶನಿವಾರ ನಗರಕ್ಕಾಗಮಿಸಿದ ಸಚಿವರು ವಿವಿಧ  ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.

ಕುಕ್ಕರಹಳ್ಳಿ ಮತ್ಸ್ಯದರ್ಶಿನಿಗೆ ಭೇಟಿ ನೀಡಿದ ವೇಳೆ ಅಲ್ಲಿನ ಸ್ವಚ್ಛತೆ ಹಾಗೂ ಗ್ರಾಹಕರ ಸ್ಪಂದನೆಗೆ ಸಂತಸ ವ್ಯಕ್ತಪಡಿಸಿದರು. ಸಿಟಿಟುಡೆಯೊಂದಿಗೆ ಮಾತನಾಡಿದ ಸಚಿವರು ಕೊಡಗು ಜಿಲ್ಲೆಗೆ ಭೇಟಿ ನೀಡಬೇಕೆಂದು ನಿರ್ಧರಿಸಿದ್ದೆ. ಆದರೆ ಅದನ್ನು ಮೊಟಕುಗೊಳಿಸಿದ್ದೇನೆ. ಕ್ರೀಡಾ ಇಲಾಖೆಗೆ ಮತ್ತಷ್ಟು ನೂತನ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುವುದು. ಶೀಘ್ರದಲ್ಲೇ ಈ  ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದರು. ಏಕಲವ್ಯ ಪ್ರಶಸ್ತಿ ಹಾಗೂ ಕರ್ನಾಟಕ ಕ್ರೀಡಾ ಪ್ರಶಸ್ತಿಗಳನ್ನು ಅಕ್ಟೊಬರ್ 7ರಂದು ಮೈಸೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ನೀಡಲಾಗುವುದು ಎಂದು ತಿಳಿಸಿದರು.

Leave a Reply

comments

Related Articles

error: