ಕ್ರೀಡೆದೇಶಪ್ರಮುಖ ಸುದ್ದಿ

ಟೆಸ್ಟ್ ಶ್ರೇಯಾಂಕದಲ್ಲಿ ನಂಬರ್ ವನ್ ಸ್ಥಾನಕ್ಕೇರಿದ ಜೇಸನ್ ಹೋಲ್ಡರ್

ದೇಶ(ನವದೆಹಲಿ),ಮಾ.17:- ಮೊಹಾಲಿ ಟೆಸ್ಟ್‌ ನಲ್ಲಿ ಸ್ಮರಣೀಯ ಪ್ರದರ್ಶನ ನೀಡುವ ಮೂಲಕ ಕಳೆದ ವಾರ ಐಸಿಸಿ ಆಲ್‌ ರೌಂಡರ್ ಟೆಸ್ಟ್ ಶ್ರೇಯಾಂಕದಲ್ಲಿ ನಂ.1 ಸ್ಥಾನಕ್ಕೇರಿದ್ದ ರವೀಂದ್ರ ಜಡೇಜಾ ಇತ್ತೀಚಿನ ಶ್ರೇಯಾಂಕದಲ್ಲಿ ಒಂದು ಸ್ಥಾನ ಕುಸಿದಿದ್ದಾರೆ.
ವೆಸ್ಟ್ ಇಂಡೀಸ್ ಆಲ್ ರೌಂಡರ್ ಜೇಸನ್ ಹೋಲ್ಡರ್ ಅವರನ್ನು ಹಿಂದಿಕ್ಕಿದ್ದಾರೆ. ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡುವ ಮೂಲಕ ಹೋಲ್ಡರ್ ತಮ್ಮ ಸ್ಥಾನವನ್ನು ಮರಳಿ ಪಡೆದಿದ್ದಾರೆ. ರವೀಂದ್ರ ಜಡೇಜಾ ಅವರಿಗಿಂತ ಮೊದಲು ಜೇಸನ್ ಹೋಲ್ಡರ್ ಐಸಿಸಿ ಟೆಸ್ಟ್ ಆಲ್‌ ರೌಂಡರ್ ಶ್ರೇಯಾಂಕದಲ್ಲಿ ಮೊದಲ ಸ್ಥಾನದಲ್ಲಿದ್ದರು.
ಬುಧವಾರ ಬಿಡುಗಡೆಯಾದ ಟೆಸ್ಟ್ ಆಲ್ ರೌಂಡರ್ ರ್ಯಾಂಕಿಂಗ್ ನಲ್ಲಿ ವಿಂಡೀಸ್ ಆಟಗಾರ ಜೇಸನ್ ಹೋಲ್ಡರ್ 393 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದ್ದಾರೆ. ಮತ್ತೊಂದೆಡೆ ರವೀಂದ್ರ ಜಡೇಜಾ 385 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ಶ್ರೇಯಾಂಕದಲ್ಲಿ ಮೂರನೇ ಸ್ಥಾನವನ್ನು ಸಹ ಭಾರತದ ಆಟಗಾರರು ಆಕ್ರಮಿಸಿಕೊಂಡಿದ್ದಾರೆ. ರವಿಚಂದ್ರನ್ ಅಶ್ವಿನ್ 341 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ. ಶಕೀಬ್ ಅಲ್ ಹಸನ್ ಮತ್ತು ಬೆನ್ ಸ್ಟೋಕ್ ಈ ಪಟ್ಟಿಯಲ್ಲಿ ನಾಲ್ಕು ಮತ್ತು ಐದನೇ ಸ್ಥಾನದಲ್ಲಿದ್ದಾರೆ. (ಏಜೆನ್ಸೀಸ್,ಎಸ್.ಎಚ್)

Leave a Reply

comments

Related Articles

error: