ಕರ್ನಾಟಕಪ್ರಮುಖ ಸುದ್ದಿ

ಕಾರ್ಯಪಡೆ ಅಧ್ಯಕ್ಷರಿಂದ ಸಭೆ

ರಾಜ್ಯ(ಮಡಿಕೇರಿ),ಮಾ.22:- ರಾಜ್ಯ ಪಶ್ಚಿಮ ಘಟ್ಟಗಳ ಕಾರ್ಯಪಡೆ ಅದ್ಯಕ್ಷರಾದ ಶಾಂತೆಯಂಡ ರವಿಕುಶಾಲಪ್ಪ ಅವರು ಧರ್ಮಸ್ಥಳದ ಧರ್ಮಾಧಿಕಾರಿ ಕಚೇರಿಯಲ್ಲಿ ಪಶ್ಚಿಮ ಘಟ್ಟಗಳ ಸಂರಕ್ಷಣೆ ಕುರಿತು ಕಾರ್ಯಾಗಾರ ಆಯೋಜಿಸುವ ಸಂಬಂಧ ಸಭೆ ನಡೆಸಿದರು.
ಪಶ್ಚಿಮ ಘಟ್ಟಗಳ ತಪ್ಪಲಿನ ಚಾರ್ಮಾಡಿ, ಶಿರಾಡಿ ವ್ಯಾಪ್ತಿಯಲ್ಲಿ ಜಲ ಮೂಲ ಸಂರಕ್ಷಣೆ ಹಾಗೂ ಗಿಡನೆಡುವ ಕಾರ್ಯಕ್ರಮದ ಕುರಿತು ಧರ್ಮಸ್ಥಳ ದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರೊಂದಿಗೆ ಚರ್ಚಿಸಲಾಯಿತು.
ಮೇ ಮೊದಲ ವಾರದಲ್ಲಿ ಈ ಕುರಿತು ಕಾರ್ಯಾಗಾರ ಆಯೋಜಿಸಲು ಹೆಗ್ಗಡೆಯವರು ಸಲಹೆ ನೀಡಿದರು. ಈ ಸಂದರ್ಭದಲ್ಲಿ ಹುಬ್ಬಳ್ಳಿಯ ಅನಿಲ್ ಕವಿ ಶೆಟ್ಟಿ, ದಕ್ಷಿಣ ಕನ್ನಡದ ಕುಸುಮಾಧರ, ಮಂಗಳೂರು ಸಹಾಯಕ ಅರಣ್ಯ ಸಂರಕ್ಷಣಾ ಅಧಿಕಾರಿ ಸುಬ್ರಹ್ಮಣ್ಯ ರಾವ್, ಧರ್ಮಸ್ಥಳ ಗ್ರಾ.ಪಂ ಅದ್ಯಕ್ಷೆ ಜಯ ಮೋನಪ್ಪ ಗೌಡ ಸೇರಿದಂತೆ ಇತರೆ ಪ್ರಮುಖರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ದೇವಳದ ಪರವಾಗಿ ಹೆಗ್ಗಡೆಯವರು ಶಾಲು ಹೊದಿಸಿ ಗೌರವಿಸಿದರು. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: