ಪ್ರಮುಖ ಸುದ್ದಿಮೈಸೂರು

ಕೊಲೆ ಬೆದರಿಕೆ ಆರೋಪ: ಮನನೊಂದ ಯುವಕ ಆತ್ಮಹತ್ಯೆಗೆ ಯತ್ನ

ಮೈಸೂರು, ಮೇ 11: ಎಪಿಎಂಸಿ ಅಧ್ಯಕ್ಷನಿಂದ ಕೊಲೆ ಬೆದರಿಕೆ ಆರೋಪದ ಹಿನ್ನೆಲೆ ಮನನೊಂದ ಯುವಕನೋರ್ವ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರು ತಾಲೂಕಿನ  ಜಯಪುರದ ಮಾವಿನಹಳ್ಳಿ ಕುಮಾರ್ (28) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ.
ಎಪಿಎಂಸಿ ಅಧ್ಯಕ್ಷ ಸಿದ್ದೇಗೌಡ, ಮಾವಿನಹಳ್ಳಿ ಸಿದ್ದೇಗೌಡರು, ಸುಜಾತ ಎಂಬುವವರು ನನಗೆ ಸೈಟ್ ವಿಚಾರದಲ್ಲಿ ತಲೆ ಹಾಕಿದರೆ ಮಚ್ಚು, ದೊಣ್ಣೆಯಿಂದ ಕೊಲೆ ಮಾಡುತ್ತೇವೆ ಮತ್ತು ರೇಪ್ ಕೇಸ್ ಹಾಕುತ್ತೇವೆ ಎಂಬ ಬೆದರಿಕೆ ಹಾಕಿದ್ದಾರೆ. ಇವರ ಕಿರುಕುಳ ತಾಳಲಾರದೇ ತಾನು ಆತ್ಮಹತ್ಯೆಗೆ ಯತ್ನಿಸಿರುವುದಾಗಿ   ಕುಮಾರ್ ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದಾರೆ. ಅಲ್ಲದೇ ಜಯಪುರ ಠಾಣಾ ಸಬ್ ಇನ್ಸ್‌ಪೆಕ್ಟರ್ ಮಹೇಶ್ ಹೆಸರನ್ನುಸಹ  ಉಲ್ಲೇಖಿಸಲಾಗಿದೆ ಎಂದು ತಿಳಿದು ಬಂದಿದೆ.
ತೀವ್ರ ಅಸ್ವಸ್ಥಗೊಂಡಿದ್ದ  ಕುಮಾರ್ ನ  ಸ್ಥಿತಿ ಚಿಂತಾಜನಕವಾಗಿದ್ದು,  ಮೈಸೂರಿನ  ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.
ಜಯಪುರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. (ವರದಿ: ಕೆ.ಎಸ್, ಎಲ್.ಜಿ)

Leave a Reply

comments

Related Articles

error: