
ಕರ್ನಾಟಕಪ್ರಮುಖ ಸುದ್ದಿ
ಬೈಕ್ ಗೆ ಬಸ್ ಡಿಕ್ಕಿ : ಸ್ಥಳದಲ್ಲೇ ಒಂದೇ ಕುಟುಂಬದ ನಾಲ್ವರ ಸಾವು
ರಾಜ್ಯ(ಚಿತ್ರದುರ್ಗ),ಮಾ.24 : ಬೈಕ್ ಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ದುರ್ಮಣಕ್ಕೀಡಾದ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ದುಮ್ಮಿ ಗ್ರಾಮದ ಬಳಿ ನಡೆದಿದೆ.
ನಾಗರಾಜ್(43), ವೀರೇಶ್(15), ಸಂತೋಷ(13), ಶೈಲಜ(40) ಮೃತರು. ಇವರೆಲ್ಲರೂ ಚನ್ನಗಿರಿ ತಾಲೂಕಿನ ಹೆಬ್ಬಳಗೆರೆ ಗ್ರಾಮದ ಬಂಧುಗಳ ಮನೆಯಲ್ಲಿ ಊಟ ಮುಗುಸಿಕೊಂಡು ತಡರಾತ್ರಿ ಸ್ವಗ್ರಾಮ ಬಿದುರ್ಗಕ್ಕೆ ತೆರಳುತ್ತಿದ್ದರು. ಈ ವೇಳೆ ಚಿತ್ರದುರ್ಗದಿಂದ ಬರುತ್ತಿದ್ದ ಖಾಸಗಿ ಬಸ್ ವೊಂದು ಓವರ್ ಟೇಕ್ ಮಾಡಿ ಮುನ್ನಗ್ಗುವಾಗ ಎದುರು ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಈ ಅವಘಡಕ್ಕೆ ಖಾಸಗಿ ಬಸ್ ಚಾಲಕನ ಅಜಾಗರೂಕತೆಯೇ ಕಾರಣ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ. ಸ್ಥಳಕ್ಕೆ ಹೊಳಲ್ಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಹೊಳಲ್ಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.(ಎಸ್.ಎಂ)