ಕರ್ನಾಟಕಪ್ರಮುಖ ಸುದ್ದಿ

ಪಾವಗಡ ಪಳವಳ್ಳಿ ಕಟ್ಟೆ ಬಸ್ ಅಪಘಾತ : ಮೃತರ ಸಂಖ್ಯೆ 7ಕ್ಕೆ ಏರಿಕೆ

ರಾಜ್ಯ(ತುಮಕೂರು),ಮಾ.26 :- ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆ ಬಸ್ ಅಪಘಾತ ಪ್ರಕರಣದಲ್ಲಿ ಮೃತಪಟ್ಟವರ ಸಂಖ್ಯೆ ಏಳಕ್ಕೆ ಏರಿಕೆಯಾಗಿದ್ದು, ಚಿಕಿತ್ಸೆ ಫಲಿಸದೇ ಗಾಯಾಳು ಮಹೇಂದ್ರ ಮೃತಪಟ್ಟಿದ್ದಾರೆ.

ಕಳೆದ ಒಂದು ವಾರದ ಹಿಂದೆ ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆ ಬಳಿ ಬಸ್ ಅಪಘಾತದಲ್ಲಿ ಗಾಯಾಗೊಂಡಿದ್ದ ಮಹೇಂದ್ರ(18) ಒಂದು ವಾರದಿಂದ ಚಿಕಿತ್ಸೆಗಾಗಿ ವಿವಿಧ ಆಸ್ಪತ್ರೆಗಳಿಗೆ ಸುತ್ತಿ, ಕೊನೆಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಪಡೆಯುತ್ತಿದ್ದರು.

ಅಪಘಾತದಲ್ಲಿ ಮಹೇಂದ್ರ  ತಲೆ ಹಾಗೂ ಬೆನ್ನಿಗೆ ಗಂಭೀರ ಗಾಯವಾಗಿತ್ತು. ಸದ್ಯ ಚಿಕಿತ್ಸೆ ಫಲಿಸದೇ ಮಹೇಂದ್ರ ಮೃತಪಟ್ಟಿದ್ದಾರೆ. ಪಾವಗಡದಲ್ಲಿ ಮಹೇಂದ್ರ ದ್ವಿತೀಯ ಪಿಯುಸಿ ಓದುತ್ತಿದ್ದರು. ಘಟನೆ ನಡೆದ ದಿನದಿಂದ ಸಾವು ಬದುಕಿನ ನಡುವೆ ಹೋರಾಡಿ ಇಂದು ಮೃತಪಟ್ಟಿದ್ದಾರೆ.(ಎಸ್.ಎಂ)

Leave a Reply

comments

Related Articles

error: