ಮೈಸೂರು

ಅಪೂರ್ವ ಸ್ನೇಹ ಬಳಗದ ವತಿಯಿಂದ ಡಾ.ಪುನೀತ್ ರಾಜಕುಮಾರ್ ಜನ್ಮದಿನದ ಪ್ರಯುಕ್ತ ವಿಶೇಷ ಮಕ್ಕಳಿಗೆ ಭೋಜನ ವ್ಯವಸ್ಥೆ

ಮೈಸೂರು,ಮಾ.28:- ಅಪೂರ್ವ ಸ್ನೇಹ ಬಳಗದ ವತಿಯಿಂದ ಡಾ.ಪುನೀತ್ ರಾಜ್ ಕುಮಾರ್ ಅವರ ಜನ್ಮದಿನಾಚರಣೆ ಅಂಗವಾಗಿ ಕುವೆಂಪುನಗರದಲ್ಲಿರುವ ಮೈತ್ರಿ ಟ್ರಸ್ಟ್ ನ ವಿಶೇಷ ಮಕ್ಕಳಿಗೆ ಚಾಮುಂಡಿಪುರಂನಲ್ಲಿರುವ ಅಪೂರ್ವ ಹೋಟೆಲ್ ನಲ್ಲಿ  ಇಂದು ವಿಶೇಷ ಭೋಜನದ ವ್ಯವಸ್ಥೆ ಮಾಡಲಾಯಿತು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅಪೂರ್ವ ಸ್ನೇಹ ಬಳಗದ ಅಧ್ಯಕ್ಷ ಅಪೂರ್ವ ಸುರೇಶ್ ಚಿತ್ರನಟ ಪುನೀತ್‌ ರಾಜ್‌ಕುಮಾರ ತಮ್ಮ ಸಾಮಾಜಿಕ ಕಾರ್ಯಗಳ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ . ಪುನೀತ್‌ ರಾಜ್‌ಕುಮಾರ ನಿಧನದ ನಂತರ ಅವರು ಮಾಡುತ್ತಿದ್ದ ಸಾಮಾಜಿಕ ಕಾರ್ಯಗಳು ತಿಳಿದುಬಂದಿವೆ. ಅನಾಥಶ್ರಮ, ಸಾವಿರಾರು ಮಕ್ಕಳಿಗೆ ವಿದ್ಯಾಭ್ಯಾಸ ಸೇರಿದಂತೆ ವಿವಿಧ ಸಾಮಾಜಿಕ ಕಾರ್ಯ ಮಾಡುತ್ತಿದ್ದರು. ಅಂಥವರನ್ನು ಕಳೆದುಕೊಂಡಿದ್ದು  ರಾಜ್ಯಕ್ಕೆ ತುಂಬಾ ನಷ್ಟವಾಗಿದೆ ಎಂದರು.
ಅಪ್ಪು ಮಾದರಿಯಲ್ಲಿ ದೇಹದಾನ ಮಾಡಲು ಯುವಕರು ಮುಂದಾಗಿ. ಮರಣ ನಂತರವೂ ತಮ್ಮ ದೇಹದ ಅಂಗಾಂಗಳನ್ನು ದಾನ ಮಾಡಬಹುದು. ನೇತ್ರದಾನ ಮಾಡುವ ಮೂಲಕ ಅಪ್ಪು ಅವರು ಸಣ್ಣ ವಯಸ್ಸಿನಲ್ಲಿಯೇ ಮಹತ್ಕಾರ್ಯಗಳನ್ನು ಮಾಡಿದ್ದಾರೆ. ಇವರ ಸೇವೆ ಎಲ್ಲರಿಗೂ ಮಾದರಿಯಾಗಿದೆ ಎಂದರು.
ಅಪ್ಪು ಸಾಮಾಜಿಕ ಕಳಕಳಿ ಹೊಂದಿರುವ ವ್ಯಕ್ತಿಯಾಗಿದ್ದರು. ಯುವ ಪಡೆ ಏನೂ ಬೇಕಾದರೂ ಸಾಧಿಸಬಹುದು ಎನ್ನುವುದಕ್ಕೆ  ಅವರ  ಸಾಮಾಜಿಕ ಸೇವೆಗಳೇ ಸಾಕ್ಷಿಯಾಗಿದೆ ಎಂದು ತಿಳಿಸಿದರು.

ಮೈತ್ರಿ ಟ್ರಸ್ಟ್ ನ ಮುಖ್ಯಸ್ಥರಾದ ವೆಂಕೋಬ್ ರಾವ್ , ಬಸವರಾಜ್ ಬಸಪ್ಪ ,ಜಯರಾಮ ಪೂಜಾರಿ, ಪುರುಷೋತ್ತಮ್, ಸುಚೇಂದ್ರ   ಶಿಕ್ಷಕ ವೃಂದದವರು ಹಾಜರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: