ಕರ್ನಾಟಕದೇಶಪ್ರಮುಖ ಸುದ್ದಿ

ಅಕ್ಟೋಬರ್ ತಿಂಗಳಲ್ಲಿ ಬೆಂಗಳೂರು-ಮೈಸೂರು ಹೈವೇ ಪೂರ್ಣ ; ಕೇಂದ್ರ ಸಚಿವ ನಿತಿನ್ ಗಡ್ಕರಿ

ದೇಶ(ನವದೆಹಲಿ),ಮಾ.28 :-  ಮುಂಬರುವ ಅಕ್ಟೋಬರ್‌ ತಿಂಗಳಲ್ಲಿ ಬೆಂಗಳೂರು-ಮೈಸೂರು ಹೈವೇ ಪೂರ್ಣಗೊಳ್ಳಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 275 ಬೆಂಗಳೂರು – ನಿಡಘಟ್ಟ – ಮೈಸೂರು 117 ಕಿಮೀ ಉದ್ದದ ರಸ್ತೆಯನ್ನು 8,350 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿದೆ. ರಸ್ತೆ ನಿರ್ಮಾಣ ಕಾರ್ಯವು ಮುಕ್ತಾಯದ ಹಂತದಲ್ಲಿದ್ದು, ಅಕ್ಟೋಬರ್ 2022 ರೊಳಗೆ ಪೂರ್ಣಗೊಳ್ಳಲಿದೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಈ ರಸ್ತೆಯು ಬೆಂಗಳೂರಿನಿಂದ ಮೈಸೂರಿಗೆ ಪ್ರಯಾಣ ಮಾಡುವ ಸಮಯವನ್ನು 3 ಗಂಟೆಗಳಿಂದ 75 ನಿಮಿಷಗಳಿಗೆ ಗಣನೀಯವಾಗಿ ಕಡಿಮೆ ಮಾಡುತ್ತದೆ. ಈ ರಸ್ತೆ ಎರಡು ಪ್ರಮುಖ ನಗರಗಳ ನಡುವಿನ ಸಂಪರ್ಕವನ್ನು ಹೆಚ್ಚಿಸುತ್ತದೆ. ಈ ಪ್ರದೇಶದಲ್ಲಿ ಪ್ರವಾಸೋದ್ಯಮ ಮತ್ತು ಆರ್ಥಿಕತೆಗೆ ಪ್ರಚೋದನೆಯನ್ನು ನೀಡುತ್ತದೆ ಎಂದಿದ್ದಾರೆ.

ಈ ಅತ್ಯಾಧುನಿಕ ಯೋಜನೆಯು 8 ಕಿಮೀ ಉದ್ದದ ಎಲಿವೇಟೆಡ್ ಕಾರಿಡಾರ್, 9 ಪ್ರಮುಖ ಸೇತುವೆಗಳು, 42 ಚಿಕ್ಕ ಸೇತುವೆಗಳು, 64 ಅಂಡರ್‍ಪಾಸ್‍ಗಳು, 11 ಮೇಲ್ಸೇತುವೆಗಳು ಮತ್ತು 5 ಬೈಪಾಸ್‍ಗಳಂತಹ ಬಹು ರಚನೆಗಳನ್ನು ಹೊಂದಿದೆ. ಇದು ಸಂಚಾರ ದಟ್ಟಣೆಯನ್ನು ನಿವಾರಿಸುವುದರ ಜೊತೆಗೆ ಮಾಲಿನ್ಯವನ್ನು ಗಮನಾರ್ಹವಾಗಿ ಕಡಿಮೆ ಮಾಡುವುದು ಈ ರಸ್ತೆಯ ವಿಶೇಷವಾಗಿದೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕ್ರಿಯಾತ್ಮಕ ನಾಯಕತ್ವದಲ್ಲಿ ವಿವಿಧ ಮೂಲಸೌಕರ್ಯ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಭ್ರಷ್ಟಾಚಾರ ಮುಕ್ತ, ಪಾರದರ್ಶಕ ಮತ್ತು ಕಾಲಮಿತಿಯಲ್ಲಿ ಪೂರ್ಣಗೊಳಿಸಲು ನಾವು ಬದ್ಧರಾಗಿದ್ದೇವೆ ಎಂದು ತಿಳಿಸಿದ್ದಾರೆ.(ಎಸ್.ಎಂ)

Leave a Reply

comments

Related Articles

error: