ಸುದ್ದಿ ಸಂಕ್ಷಿಪ್ತ

ಜನ-ಮನ ಫಲಾನುಭವಿಗಳೊಂದಿಗೆ ಸಂವಾದ ಮೇ.13ಕ್ಕೆ

ಮೈಸೂರು.ಮೇ.11 :ಸರ್ಕಾರಿ ಯೋಜನೆಗಳ ಫಲಾನುಭವಿಗಳೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವರ ಸಂವಾದ  ಕಾರ್ಯಕ್ರಮ ‘ಜನಮನ’ ವನ್ನು ಮೇ.13 ರಂದು ಬೆಳಿಗ್ಗೆ 11ಕ್ಕೆ ಕಲಾಮಂದಿರದಲ್ಲಿ ಆಯೋಜಿಸಲಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಕಾರ್ಯಕ್ರಮವನ್ನು ಉದ್ಘಾಟಿಸಿ ಸಂವಾದ ನಡೆಸುವರು, ಶಾಸಕ ವಾಸು ಅಧ್ಯಕ್ಷತೆ ವಹಿಸುವರು, ಮುಖ್ಯ ಅತಿಥಿಗಳಾಗಿ ಸಚಿವ ತನ್ವೀರ್ ಸೇಠ್, ಮೇಯರ್ ಎಂ.ಜೆ.ರವಿಕುಮಾರ್, ವಿಧಾನ ಪರಿಷತ್ ಉಪಸಭಾಪತಿ ಮರಿತಿಬ್ಬೇಗೌಡ, ಜಿ.ಪಂ ಅಧ್ಯಕ್ಷೆ ನಯಿಮಾ ಸುಲ್ತಾನ ನಜೀರ್ ಅಹಮದ್, ಸಂಸದರಾದ ಪ್ರತಾಪ್ ಸಿಂಹ, ಆರ್.ದ್ರುವನಾರಾಯಣ್, ಸಿ.ಎಸ್.ಪುಟ್ಟರಾಜು, ಶಾಸಕರಾದ ಎಂ.ಕೆ.ಸೋಮಶೇಖರ್, ಜಿ.ಟಿ.ದೇವೇಗೌಡ, ಎಸ್.ಚಿಕ್ಕಮಾದು, ಸಾ.ರಾ.ಮಹೇಶ್, ಕಳಲೆ ಕೇಶವಮೂರ್ತಿ, ಎಚ್.ಪಿ.ಮಂಜುನಾಥ್, ವಿಧಾನ ಪರಿಷತ್ ಸದಸ್ಯರಾದ ಸಂದೇಶ್ ನಾಗರಾಜು, ಆರ್.ಧರ್ಮಸೇನಾ, ಶ್ರೀಕಂಠೇಗೌಡ, ಕೆ.ವಿ.ನಾರಾಯಣಸ್ವಾಮಿ ಹಾಗೂ ಇತರರು ಪಾಲ್ಗೊಳ್ಳುವರು. (ಕೆ.ಎಂ.ಆರ್)

Leave a Reply

comments

Related Articles

error: