ಕರ್ನಾಟಕಪ್ರಮುಖ ಸುದ್ದಿ

ಬಾಲಗೌರವ ಪ್ರಶಸ್ತಿ’ಗೆ ಅರ್ಜಿ ಸಲ್ಲಿಸಲು ಕಾಲಾವಕಾಶ

ರಾಜ್ಯ(ಮಡಿಕೇರಿ) ಏ.5:-ಕ್ರೀಡಾ ಕ್ಷೇತ್ರ, ನೃತ್ಯ ಕ್ಷೇತ್ರ, ಸಾಹಿತ್ಯ ಕ್ಷೇತ್ರ, ಕರಕುಶಲ ಕ್ಷೇತ್ರ, ಚಿತ್ರಕಲೆ ಕ್ಷೇತ್ರ, ಬಹುಮುಖ ಪ್ರತಿಭೆ, ನಾಟಕ ಕ್ಷೇತ್ರ ಹೀಗೆ 08 ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆಯನ್ನು ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಮಾಡಿದ 18 ವರ್ಷದ ಒಳಗಿನ ಮಕ್ಕಳಿಗೆ “ಬಾಲಗೌರವ ಪ್ರಶಸ್ತಿ’ಗೆ ಅರ್ಜಿ ಆಹ್ವಾನಿಸಲಾಗಿದೆ.
ಈ ಪ್ರಶಸ್ತಿಗೆ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ವಿಶೇಷ ಸಾಧನೆಗೈದ ಪ್ರಶಸ್ತಿ ಪುರಸ್ಕøತ ಮಗುವಾಗಿರಬೇಕು. ಮಕ್ಕಳು ಅಕಾಡೆಮಿ ಬಾಲಗೌರವ ಪ್ರಶಸ್ತಿಗೆ ತಮ್ಮ ಸ್ವಯಂ ದೃಢೀಕೃತ ನಕಲು ದಾಖಲೆಗಳೊಂದಿಗೆ ಹಾಗೂ ಸ್ವ-ವಿವರಗಳನ್ನೊಳಗೊಂಡ ಮನವಿಯೊಂದಿಗೆ ಅರ್ಜಿ ಸಲ್ಲಿಸಲು ಏಪ್ರಿಲ್, 18 ರವರೆಗೆ ವಿಸ್ತರಿಸಲಾಗಿದೆ. ಅರ್ಜಿಯನ್ನು ಯೋಜನಾಧಿಕಾರಿಗಳು, ಕರ್ನಾಟಕ ಬಾಲವಿಕಾಸ ಅಕಾಡೆಮಿ, ಚಂದ್ರಿಕಾ ಲೇಔಟ್ ಹಿಂಭಾಗ, ಕೆಎಚ್‍ಬಿ ಕಾಲೋನಿ, ಲಕಮನಹಳ್ಳಿ ಧಾರವಾಡ-580004 ಇಲ್ಲಿಗೆ ಕಳುಹಿಸುವುದು. ಅರ್ಜಿ ಸಲ್ಲಿಸುವಾಗ “ಅಕಾಡೆಮಿ ಬಾಲಗೌರವ ಪ್ರಶಸ್ತಿಗಾಗಿ ಅರ್ಜಿ” ಎಂದು ಲಕೋಟೆ ಮೇಲೆ ನಮೂದಿಸಿರಬೇಕು.
ಹೆಚ್ಚಿನ ಮಾಹಿತಿಗೆ ಯೋಜನಾಧಿಕಾರಿಗಳು, ಚಂದ್ರಿಕಾ ಲೇಔಟ್ ಹಿಂಭಾಗ, ಕೆ.ಎಚ್.ಬಿ ಕಾಲೋನಿ, ಲಕಮನಹಳ್ಳಿ ಧಾರವಾಡ-580004, ಕಚೇರಿ ದೂರವಾಣಿ ಸಂ: 0836-2461666 ನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: