ಮೈಸೂರು

ಬಾಬು ಜಗಜೀವನ ರಾಮ್ ಅವರ 115 ನೇ ಜನ್ಮ ದಿನಾಚರಣೆ : ಮೆರವಣಿಗೆಗೆ ಚಾಲನೆ

ಮೈಸೂರು,ಏ.5:-  ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಡಾ. ಬಾಬು ಜಗಜೀವನರಾಮ್ ಅವರ 115 ನೇ ಜನ್ಮ ದಿನಾಚರಣೆಯನ್ನು ಇಂದು ಮೈಸೂರಿನಲ್ಲಿ ಆಚರಿಸಲಾಗುತ್ತಿದ್ದು, ನಗರದ ರೈಲ್ವೆ ನಿಲ್ದಾಣ ಮುಂಭಾಗದಲ್ಲಿರುವ ಡಾ.ಬಾಬು ಜಗಜೀವನ ರಾಮ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಮೆರವಣಿಗೆಗೆ ಶಾಸಕ ಎಲ್.ನಾಗೇಂದ್ರ ಚಾಲನೆ ನೀಡಿದರು.

ಈ ಕಾರ್ಯಕ್ರಮದಲ್ಲಿ  ಮೈಸೂರು ಮಹಾನಗರ ಪಾಲಿಕೆಯ ಮಹಾಪೌರರಾದ ಸುನಂದಾ ಪಾಲನೇತ್ರ, ಸಫಾಯಿ‌ ಕರ್ಮಚಾರಿ ಆಯೋಗದ ಅಧ್ಯಕ್ಷರಾದ ಕೋಟೆ ಶಿವಣ್ಣ , ಮೂಡಾ ಅಧ್ಯಕ್ಷರಾದ ಹೆಚ್.ವಿ.ರಾಜೀವ್ ,   ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್,  ಪೊಲೀಸ್ ಆಯುಕ್ ಡಾ.ಚಂದ್ರಗುಪ್ತ,  ಉಪ ಪೊಲೀಸ್ ಆಯುಕ್ತರಾದ ಪ್ರದೀಪ್ ಗುಂಟಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು. ಮೆರವಣಿಗೆ ಕಲಾಮಂದಿರಕ್ಕೆ ತೆರಳಲಿದೆ. (ಕೆ.ಎಸ್,ಎಸ್.ಎಚ್)

 

Leave a Reply

comments

Related Articles

error: