ಕರ್ನಾಟಕಪ್ರಮುಖ ಸುದ್ದಿ

ಬೆಲೆ ಏರಿಕೆ ಬಗ್ಗೆ ಕಾಂಗ್ರೆಸ್ ಗೆ ಪ್ರತಿಭಟನೆ ಮಾಡುವ ನೈತಿಕ ಹಕ್ಕಿಲ್ಲ ; ಸಿಎಂ ಬೊಮ್ಮಾಯಿ

ರಾಜ್ಯ(ಬೆಂಗಳೂರು),ಏ.11 :-  ಬೆಲ ಏರಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್‌ಗೆ ಪ್ರತಿಭಟನೆ ಮಾಡುವ ನೈತಿಕ ಹಕ್ಕಿಲ್ಲ. ದೇಶದಲ್ಲಿ ಅತಿಹೆಚ್ಚು ಬೆಲೆಯೇರಿಕೆ ಮಾಡಿದ ಖ್ಯಾತಿ, ಕೀರ್ತಿ, ದಾಖಲೆ ಕಾಂಗ್ರೆಸ್‌ಗೆ ಸೇರಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಪಿ.ಎಫ್.ಐ. ವಿದ್ಯಾರ್ಥಿಗಳ ಪ್ರತಿಭಟನೆ ಕುರಿತಂತೆ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ರಚಿಸಿರುವ ಸಮಿತಿ ಪರಾಮರ್ಶೆ ಮಾಡುತ್ತಿದ್ದು ವರದಿ ಬಂದ ಕೂಡಲೇ ತೀರ್ಮಾನ ಮಾಡಲಾಗುವುದು ಎಂದಿದ್ದಾರೆ.

ಮುಸ್ಕಾನ್ ಅವರಿಗೆ ಅಲ್ ಖೈದಾ ಮುಖ್ಯಸ್ಥರು ನೀಡಿರುವ ಬೆಂಬಲಕ್ಕೆ ಸಂಬಂಧಿಸಿದಂತೆ ಅನಂತ ಕುಮಾರ್ ಹೆಗಡೆ ಅವರು ಪತ್ರ ಬರೆದಿದ್ದಾರೆ. ಈ ಬಗ್ಗೆ ತನಿಖೆಯಾಗಿದೆಯೇ ಎನ್ನುವ ಪ್ರಶ್ನೆಗೆ ಉತ್ತರಿಸಿ, ಏನಿದೆ ಎಂದು ಗೊತ್ತಿಲ್ಲ. ಅನಂತಕುಮಾರ್ ಹೆಗಡೆ ಅವರ ಬಳಿ ಚರ್ಚೆ ಮಾಡಿ ಅವರ ಬಳಿ ಇರುವ ಮಾಹಿತಿ ಬಗ್ಗೆ ತಿಳಿದುಕೊಳ್ಳಲಾಗುವುದು. ಅದರ ಆಧಾರದ ಮೇಲೆ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ಹೇಳಿದ್ದಾರೆ.

ಸುಮಲತಾ ಅಂಬರೀಶ್ ಅವರು ಬಿಜೆಪಿ ಸೇರುತ್ತಿದ್ದಾರೆಯೇ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿ ಅವರ ಸಹೋದರಿಯ ಮಗಳ ಮದುವೆಗೆ ಆಹ್ವಾನಿಸಲು ಬಂದಿದ್ದರು. ಕೆಲವು ಅಭಿವೃದ್ಧಿ ಕೆಲಸಗಳ ಬಗ್ಗೆ ಚರ್ಚಿಸಲಾಯಿತು ಎಂದು ತಿಳಿಸಿದ್ದಾರೆ.

ಇಂದು ಉಡುಪಿಯಲ್ಲಿ ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದೇನೆ. ನಾಳೆ ಮಂಗಳೂರಿನಲ್ಲಿ ಪಕ್ಷದ ಸಂಘಟನಾತ್ಮಕ ಸಭೆಯಲ್ಲಿ ಭಾಗವಹಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.(ಎಸ್.ಎಂ)

Leave a Reply

comments

Related Articles

error: