ನಮ್ಮೂರುಮೈಸೂರು

ನಾಳೆ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ

ಮೈಸೂರು,ಏ.13 : – ಮೈಸೂರು ನಗರ ಹಾಗೂ ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿಯು ಏ.14 ರಂದು ಭಾರತದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರ ಜಯಂತಿಯನ್ನು ನಗರದ ಕಾಂಗ್ರೆಸ್ ಭವನದಲ್ಲಿ ಮಧ್ಯಾಹ್ನ 12 ಗಂಟೆಗೆ ಹಮ್ಮಿಕೊಂಡಿದೆ.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಗರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಆರ್.ಮೂರ್ತಿಯವರು ವಹಿಸಲಿದ್ದು, ಕಾರ್ಯಕ್ರಮದ ನೇತೃತ್ವವವನ್ನು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಡಾ.ಬಿ.ಜೆ.ವಿಜಯ್ ಕುಮಾರ್ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ರಾಷ್ಟ್ರೀಯ ನಾಟಕ ಶಾಲೆಯ ನಿಕಟಪೂರ್ವ ನಿರ್ದೇಶಕರಾದ ಹಾಗೂ ಸಂಸ್ಕೃತಿ ಚಿಂತಕರಾದ ಬಿ.ಬಸವಲಿಂಗಯ್ಯ ನವರು ಮುಖ್ಯ ಭಾಷಣಕಾರಾಗಿ ಆಗಮಿಸಲಿದ್ದಾರೆ, ಮುಖ್ಯ ಅತಿಥಿಗಳಾಗಿ ಶಾಸಕರಾದ ತನ್ವೀರ್ ಸೇಠ್, ಹೆಚ್.ಪಿ.ಮಂಜುನಾಥ್, ಡಾ.ಯತೀಂದ್ರ ಸಿದ್ದರಾಮಯ್ಯ, ಅನಿಲ್ ಚಿಕ್ಕಮಾದು, ವಿಧಾನ ಪರಿಷತ್ ಸದಸ್ಯರಾದ ಡಾ.ಡಿ.ತಿಮಯ್ಯ, ಮಾಜಿ ಶಾಸಕರಾದ ಕೆ.ವೆಂಕಟೇಶ್, ವಾಸು, ಎಂ.ಕೆ.ಸೋಮಶೇಖರ್, ಕಳಲೆ ಕೇಶವಮೂರ್ತಿ ರವರು ಭಾಗವಹಿಸಲಿದ್ದಾರೆ. (ಕೆ.ಎಸ್,ಎಸ್.ಎಂ)

Leave a Reply

comments

Related Articles

error: