
ಕರ್ನಾಟಕ
ಭಾರೀ ಮಳೆಗೆ ಶಾಲೆಯ ಮೇಲ್ಛಾವಣಿ ಕುಸಿತ
ರಾಜ್ಯ, (ಕೋಲಾರ) ಮೇ 12: ಕಳೆದ ಎರಡು ದಿನಗಳಿಂದ ಮಳೆ ಸುರಿದ ಹಿನ್ನೆಲೆ ಸರ್ಕಾರಿ ಶಾಲೆಯೊಂದರ ಮೇಲ್ಛಾವಣಿ ಕುಸಿದು ಬಿದ್ದಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ.
ಮೇಲ್ಛಾವಣಿ ಕುಸಿದು ಎರಡು ದಿನ ಕಳೆದರೂ ಅಧಿಕಾರಿಗಳು ಶಾಲೆಗೆ ಭೇಟಿ ನೀಡದ ಕಾರಣ ಶಿಕ್ಷಣ ಇಲಾಖೆ ವಿರುದ್ದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಾಲೆಗೆ ಬೇಸಿಗೆ ರಜೆ ಹಿನ್ನೆಲೆ ಭಾರಿ ಅವಘಡವೊಂದು ತಪ್ಪಿದೆ. (ವರದಿ: ಎಸ್.ಎನ್.ಎಲ್.ಜಿ)