ಮೈಸೂರು

ಗೃಹಿಣಿ ನೇಣಿಗೆ ಶರಣು

ಮೈಸೂರು, ಮೇ.12:-  ಗೃಹಿಣಿಯೋರ್ವಳು ಮನನೊಂದು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನಲ್ಲಿ ನಡೆದಿದ್ದು, ಅನುಮಾನಾಸ್ಪದ ಸಾವೆಂಬ ಶಂಕೆ ವ್ಯಕ್ತವಾಗಿದೆ.

ಮೃತಳನ್ನು ಕಾಮಕನ ಹುಂಡಿ ನಿವಾಸಿ ಮಂಜುನಾಥ್ ಎಂಬವರ ಪತ್ನಿ  ರಾಧಿಕಾ(28) ಎಂದು ಗುರುತಿಸಲಾಗಿದೆ. ಈಕೆಗೆ ಇಬ್ಬರು ಮಕ್ಕಳಿದ್ದು ಇದೀಗ ಅವರು ತಾಯಿಯಿಲ್ಲದ ತಬ್ಬಲಿಗಳಾಗಿದ್ದಾರೆ. ಶುಕ್ರವಾರ ಬೆಳಗಿನ ಜಾವ ತನ್ನ ಕೊಠಡಿಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಕಾರಣ ತಿಳಿದುಬಂದಿಲ್ಲ. ಗ್ರಾಮಾಂತರ ಠಾಣೆಯ ಸಬ್ ಇನ್ಸಪೆಕ್ಟರ್ ಜಯಪ್ರಕಾಶ್ ಸಿಬ್ಬಂದಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅನುಮಾನಾಸ್ಪದ ಸಾವು ಎಂಬ ಶಂಕೆ ವ್ಯಕ್ತವಾಗಿದ್ದು, ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. – (ವರದಿ: ಕೆ.ಎಸ್,ಎಸ್.ಎಚ್)

Leave a Reply

comments

Related Articles

error: