ಕರ್ನಾಟಕಪ್ರಮುಖ ಸುದ್ದಿ

ಭ್ರಷ್ಟಾಚಾರ ನಡೆಸಿ ಜೈಲಿಗೆ ಹೋಗಿ ಬಂದ ವ್ಯಕ್ತಿಗೆ ನನ್ನ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ; ಸಚಿವ ಅಶ್ವಥ್ ನಾರಾಯಣ ತಿರುಗೇಟು

ರಾಜ್ಯ(ಬೆಂಗಳೂರು),ಮೇ.05 : ಭ್ರಷ್ಟಾಚಾರಕ್ಕೆ ಹೆಸರುವಾಸಿಯಾಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು ಭ್ರಷ್ಟಾಚಾರದ ಬಗ್ಗೆ ಬಹಳ ದೊಡ್ಡ ಹೇಳಿಕೆ ನೀಡುತ್ತಿದ್ದಾರೆ. ಭ್ರಷ್ಟಾಚಾರ ನಡೆಸಿ ಜೈಲಿಗೆ ಹೋಗಿ ಬಂದ ವ್ಯಕ್ತಿಗೆ ನನ್ನ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥ್‌ನಾರಾಯಣ, ಡಿ.ಕೆ.ಶಿವಕುಮಾರ್ ಗೆ ತಿರುಗೇಟು ನೀಡಿದ್ದಾರೆ.

ಪಿಎಸ್‌ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ‘ಅಶ್ವತ್ಥನಾರಾಯಣ ಅತ್ಯಂತ ಭ್ರಷ್ಟಸಚಿವ’ ಎಂಬ ಡಿ.ಕೆ.ಶಿವಕುಮಾರ್‌ಹೇಳಿಕೆಗೆ ಪ್ರತಿಕ್ರಿಯಿಸಿ ವಿಧಾನಸೌಧದ ಬಳಿ ಸಚಿವ ಅಶ್ವಥ್ ನಾರಾಯಣ ಮಾಧ್ಯಮದೊಂದಿಗೆ ಮಾತನಾಡಿ, ‘ಅವರು ಯಾವುದೇ ದಾಖಲೆ ಇಲ್ಲದೆ ಮಾತನಾಡಿದ್ದಾರೆ. ಜೈಲಿಗೆ ಹೋಗಿ ಬಂದ ವ್ಯಕ್ತಿ ನನ್ನ ಬಗ್ಗೆ ಮಾತನಾಡಿದ್ದಾರೆ. ನೈತಿಕತೆ ಇಲ್ಲದ ವ್ಯಕ್ತಿ ಮಾಡಿರುವ ಸುಳ್ಳು ಆರೋಪಗಳನ್ನು ನಾನು ಖಂಡಿಸುತ್ತೇನೆ’ ಎಂದು ಕಿಡಿಕಾರಿದ್ದಾರೆ.

‘ಕಾಂಗ್ರೆಸ್‌ ಸೋತು ಸುಣ್ಣವಾಗಿದೆ. ಹೀಗಾಗಿ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಈ ವ್ಯಕ್ತಿಯ ಆರೋಪಕ್ಕೆ ಯಾವುದೇ ಕಿಮ್ಮತ್ತಿಲ್ಲ. ಸಿಐಡಿ ತನಿಖೆ ನಡೆಸುತ್ತಿದ್ದು, ದಾಖಲೆ ಇದ್ದರೆ ಮುಂದೆ ಬನ್ನಿ. ತನಿಖೆ ವೇಳೆ ಸುಳ್ಳು ಹೇಳಿಕೆಗಳಿಂದ ದಾರಿ ತಪ್ಪಿಸುವ ಪ್ರಯತ್ನ ಮಾಡಬೇಡಿ. ಕಾಂಗ್ರೆಸ್‌ ಪಕ್ಷವೇ ಜೈಲಿಗೆ ಹೋಗಿ ಬಂದವರನ್ನು ಅಧ್ಯಕ್ಷರನ್ನಾಗಿ ಮಾಡಿದೆ. ಅಂತಹ ಅಧ್ಯಕ್ಷರು ಬೇರೆ ಪಕ್ಷಗಳತ್ತ ಬೊಟ್ಟು ಮಾಡುತ್ತಿರುವುದು ಹಾಸ್ಯಾಸ್ಪದ’ವಾಗಿದೆ ಎಂದು ವ್ಯಂಗ್ಯವಾಡಿದ್ದಾರೆ.(ಎಸ್.ಎಂ)

Leave a Reply

comments

Related Articles

error: