ದೇಶಪ್ರಮುಖ ಸುದ್ದಿ

ಅಡುಗೆ ಅನಿಲ ಸಿಲಿಂಡರ್ ಬೆಲೆಯಲ್ಲಿ 50 ರೂಪಾಯಿ ಏರಿಕೆ

ದೇಶ(ನವದೆಹಲಿ),ಮೇ.7:- ಈಗಾಗಲೇ ದೇಶದಲ್ಲಿ ಹಣದುಬ್ಬರದಿಂದ ಕಂಗಾಲಾಗಿರುವ ಶ್ರೀಸಾಮಾನ್ಯನಿಗೆ ಮತ್ತೊಮ್ಮೆ ಆಘಾತ ನೀಡುವ ಸುದ್ದಿ ಹೊರಬಿದ್ದಿದೆ. ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 50 ರೂಪಾಯಿ ಏರಿಕೆಯಾಗಿದೆ.

14.2 ಕೆಜಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ ಇಂದಿನಿಂದ 50 ರೂಪಾಯಿ ಏರಿಕೆಯಾಗಿದೆ. ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ ನ ಹೊಸ ಬೆಲೆ ಈಗ ಪ್ರತಿ ಸಿಲಿಂಡರ್‌ಗೆ 999.50 ರೂ. ದೇಶಾದ್ಯಂತ ಇಂದಿನಿಂದ ಹೆಚ್ಚಿದ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ ಗಳ ಬೆಲೆಯನ್ನು ಜಾರಿಗೆ ತರಲಾಗಿದೆ.

ಈ ಹಿಂದೆ ಮಾರ್ಚ್ 22 ರಂದು ಗೃಹಬಳಕೆಯ ಎಲ್‌ ಪಿಜಿ ಸಿಲಿಂಡರ್‌ ಗೆ 50 ರೂ.ಗಳಷ್ಟು ಏರಿಕೆ ಮಾಡಲಾಗಿತ್ತು. ನಂತರ ದೆಹಲಿಯಲ್ಲಿ 14.2 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆ 949.50 ರೂ.ಗೆ ತಲುಪಿತ್ತು. ಈಗ ಮತ್ತೊಮ್ಮೆ ಹಣದುಬ್ಬರದಿಂದ ಜನರು ತತ್ತರಿಸಿದ್ದಾರೆ. ಇದೀಗ ಬೆಲೆ ಏರಿಕೆಯ ನಂತರ ದೆಹಲಿಯಲ್ಲಿ ಗೃಹಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ 999.50 ರೂ.ಗೆ ಏರಿಕೆಯಾಗಿದೆ. (ಏಜೆನ್ಸೀಸ್,ಎಸ್.ಎಚ್)

Leave a Reply

comments

Related Articles

error: