ಮೈಸೂರು

ನಗರದ ಅಂದಗೆಡಿಸುವ ಪ್ಲೆಕ್ಸ್, ಬ್ಯಾನರ್ ಅಳವಡಿಸಿದಲ್ಲಿ ದಂಡ : ಆಯುಕ್ತರ ಎಚ್ಚರಿಕೆ

ಮೈಸೂರು,ಮೇ.9: – ನಗರವನ್ನು ಅಂದಗೆಡಿಸುವ ಪ್ಲೆಕ್ಸ್, ಬ್ಯಾನರ್ ಅಳವಡಿಸಿದಲ್ಲಿ ನಿರ್ದಾಕ್ಷಿಣ್ಯವಾಗಿ ದಂಡ ವಿಧಿಸಲಾಗುವುದು ಎಂದು ಮೈಸೂರು ಮಹಾನಗರಪಾಲಿಕೆ ಆಯುಕ್ತ ಲಕ್ಷ್ಮೀಕಾಂತರೆಡ್ಡಿ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು, ಪ್ಲೆಕ್ಸ್, ಬ್ಯಾನರ್ ಅಳವಡಿಸದಂತೆ ನೋಡಿಕೊಳ್ಳಬೇಕು. ರಾತ್ರೋರಾತ್ರಿ ಅಳವಡಿಸಿದಲ್ಲಿ ಸಂಬಂಧಪಟ್ಟ ರಾಜಕೀಯ ಪಕ್ಷ, ಸಂಸ್ಥೆಗಳಿಗೆ ನೋಟಿಸ್‌ ನೀಡಿ ದಂಡ ವಸೂಲಿ ಮಾಡಿ ತೆರವುಗೊಳಿಸಬೇಕು ಎಂದು ಎಲ್ಲ ವಲಯ ಕಚೇರಿಗಳ ಸಹಾಯಕ ಆಯುಕ್ತರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಸಾರ್ವಜನಿಕ ಸ್ಥಳ, ವೃತ್ತಗಳಲ್ಲಿ ಪ್ಲೆಕ್ಸ್, ಬ್ಯಾನರ್ ಅಳವಡಿಸಿ ನಗರದ ಅಂದವನ್ನು ಹಾಳು ಮಾಡುತ್ತಿರುವುದು ಕಾನೂನು ಬಾಹಿರ. 1981ರ ಕರ್ನಾಟಕ ಓಪನ್ ಆ್ಯಕ್ಟ್ ಮತ್ತು 1964ರ ಕರ್ನಾಟಕ ಮುನ್ಸಿಪಾಲಿಟಿ ಆ್ಯಕ್ಟ್ ಪ್ರಕಾರ 6 ತಿಂಗಳ ಸಜೆ ಹಾಗೂ ಒಂದು ಸಾವಿರ ರೂ. ದಂಡ ವಿಧಿಸಬಹುದು. ಇತ್ತೀಚಿಗೆ ಕೆಲವು ರಾಜಕೀಯ ಪಕ್ಷದವರು ಮೈಸೂರಿನ ಪ್ರಮುಖ ರಸ್ತೆ, ವೃತ್ತಗಳಲ್ಲಿ ಪೋಸ್ಟರ್ ಗಳನ್ನು ಅಳವಡಿಸಿದ್ದರು. ಅದನ್ನು ಪಾಲಿಕೆಯಿಂದ ತೆರವುಗೊಳಿಸಲಾಗಿದೆ. ಈ ಸಂಬಂಧ ಎಲ್ಲಾ ರಾಜಕೀಯ ಪಕ್ಷಗಳಿಗೆ ನೋಟಿಸ್ ನೀಡಲಾಗಿದೆ ಎಂದು ತಿಳಿಸಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: