ಕರ್ನಾಟಕಪ್ರಮುಖ ಸುದ್ದಿ

ರಾಷ್ಟ್ರೀಯ ಡೆಂಗ್ಯೂ ದಿನಾಚರಣೆಯ ಅಂಗವಾಗಿ ಗ್ರಾಮ ಪಂಚಾಯತ್‍ಅಭಿವೃದ್ದಿ

ಅಧಿಕಾರಿಗಳಿಗೆ ಪುನರ್ ಮನನ ತರಬೇತಿ ಕಾರ್ಯಾಗಾರ

ರಾಜ್ಯ(ದಾವಣಗೆರೆ) ಮೇ.13 :- ಸೊಳ್ಳೆಗಳನ್ನು ನಿಯಂತ್ರಿಸುವುದರಿಂದ ಮಲೇರಿಯಾ ಡೆಂಗ್ಯೂ ಮತ್ತು ಚಿಕನ್‍ಗುನ್ಯಾ ರೋಗಗಳನ್ನು ತಡೆಗಟ್ಟಬಹುದು. ಇದಕ್ಕೆ ಎಲ್ಲರ ಸಹಕಾರ ಅತ್ಯಗತ್ಯ ಎಂದು ಜಿಲ್ಲಾ ಕೀಟ ಜನ್ಯರೋಗ ನಿಯಂತ್ರಣಾಧಿಕಾರಿ ಡಾ.ನಟರಾಜ್.ಕೆ ತಿಳಿಸಿದರು.
ಇತ್ತೀಚೆಗೆ ನಗರದ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಿದ ದಾವಣಗೆರೆ ತಾಲ್ಲೂಕಿನ ಎಲ್ಲಾ ಪಂಚಾಯತ್ ಅಭಿವೃದ್ದಿ ಅಧಿಕಾರಿಗಳಿಗೆ, ಡೆಂಗ್ಯೂ ಮತ್ತು ಚಿಕನ್‍ಗುನ್ಯ ಕುರಿತು ಕಾರ್ಯಾಗಾರದಲ್ಲಿ ಮಾತಾನಾಡಿದ ಅವರು ನೀರು ನಿಲ್ಲದಂತೆ ನಿಗಾವಹಿಸಿ ಪೈಪ್ ಲೈನ್ ಹೊಡೆದ ತಕ್ಷಣ ದುರಸ್ಥಿಗೊಳಿಸಿ ನೀರು ಶೇಖರಣೆಯಾದಂತೆ ನೋಡಿಕೊಳ್ಳಬೇಕು. ಇದರಿಂದ ಸೊಳ್ಳೆಗಳು ಉತ್ಪತ್ತಿಯಾಗಿ ಡೆಂಗ್ಯೂ ಮತ್ತು ಚಿಕನ್‍ಗುನ್ಯಾ ರೋಗಗಳು ಹರಡುತ್ತವೆ. ಈಗ ಮಳೆಗಾಲ ಆರಂಭವಾಗಿರುವುದರಿಂದ ತಗ್ಗು ಪ್ರದೇಶಗಳಲ್ಲಿ ಮತ್ತು ಬಯಲಿನಲ್ಲಿ ಬಿಸಾಡಿದ ಟೈರುಗಳಲ್ಲಿ, ಪ್ಲಾಸ್ಟಿಕ್ ಲೋಟಗಳಲ್ಲಿ, ಮನೆಯ ಸುತ್ತ-ಮುತ್ತ ತ್ಯಾಜ್ಯ ವಸ್ತುಗಳನ್ನು ಎಲ್ಲೆಂದರಲ್ಲಿ ಬಿಸಾಕುವುದರಿಂದ ನೀರು ನಿಂತು ಇಂತಹ ಖಾಯಿಲೆಗಳು ಹರಡುತ್ತವೆ. ಸಾರ್ವಜನಿಕರು ಮನವರಿಕೆ ಮಾಡಿಕೊಂಡು ಸೂಕ್ತ ಸ್ಥಳದಲ್ಲಿ ವಿಲೇವಾರಿ ಮಾಡಬೇಕೆಂದು ಹೇಳಿದರು.
ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ್.ಎಲ್.ಡಿ ಮಾತನಾಡಿ, ಸಾರ್ವಜನಿಕರು ಸ್ವಯಂ ರಕ್ಷಣಾ ವಿಧಾನಗಳನ್ನು ಅನುಸರಿಸಬೇಕು. ಮಕ್ಕಳು, ವೃದ್ಧರು ರಾತ್ರಿ ವೇಳೆಯಲ್ಲಿ ಅಲ್ಲದೇ ಹಗಲಿನಲ್ಲಿ ಸಹ ಸೊಳ್ಳೆ ಪರದೆಯನ್ನು ಬಳಸಬೇಕು. ಜೊತೆಗೆ ಆಲ್‍ಔಟ್‍ಗಳನ್ನು, ಬೇವಿನ ಸೊಪ್ಪಿನ ಹೊಗೆ ಹಾಕಬೇಕು. ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳಬೇಕು ಜೊತೆಗೆ ಮನೆಯಲ್ಲಿರುವ ನೆಲದತೊಟ್ಟಿ ಮತ್ತು ಡ್ರಂಗಳಲ್ಲಿ ಶೇಖರಣೆಯಾಗಿರುವ ನೀರುನ್ನು ತೆಗೆದು ತೊಳೆಯಬೇಕು. ಇದರಿಂದ ಸೊಳ್ಳೆಗಳ ಉತ್ಪತ್ತಿ ತಡೆಗಟ್ಟಬಹುದು ಎಂದು ಪಂಚಾಯತ್ ಅಭಿವೃದ್ದಿ ಅಧಿಕಾರಿಗಳಿಗೆ ತಿಳಿಸಲಾಯಿತು.
ತಾಲ್ಲೂಕು ಕಾರ್ಯ ನಿರ್ವಹಣಾಧಿಕಾರಿ ಜಿ.ಆನಂದ ಮಾತನಾಡಿ, ಎಲ್ಲಾ ಪಂಚಾಯತ್ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿನ ಎಲ್ಲಾ ಹಳ್ಳಿಗಳಲ್ಲಿ ನೀರು ಸರಾಗವಾಗಿ ಹರಿಯುವಂತೆ ನೋಡಿಕೊಳ್ಳಬೇಕು. ಘನತ್ಯಾಜ್ಯ ವಸ್ತುಗಳನ್ನು ಸೂಕ್ತ ಸ್ಥಳಗಳಲ್ಲಿ ವಿಲೇವಾರಿ ಮಾಡಬೇಕು. ಆರೋಗ್ಯ ಇಲಾಖೆಯೊಂದಿಗೆ ಸಹಕರಿಸಿ ಸೊಳ್ಳೆಗಳ ನಿಯಂತ್ರಣವನ್ನು ನಾವೆಲ್ಲರೂ ಸೇರಿ ಮಾಡೋಣ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕೀಟತಜ್ಞ ಸತೀಶ್ ಮಾಳಗಿ, ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಹೆಚ್. ಉಮಾಪತಿ, ಆರೋಗ್ಯ ಇಲಾಖೆಯ ಕಾರ್ಯಕ್ರಮ ವ್ಯವಸ್ಥಾಪಕರಾದ ರವಿ.ಪಿ.ವಿ, ಜಿಲ್ಲಾ ಮಲೇರಿಯಾ ಕಚೇರಿಯ ಸಿಬ್ಬಂದಿ ವರ್ಗ ಮತ್ತು ತಾಲ್ಲೂಕು ಪಂಚಾಯತ್ ಸಿಬ್ಬಂದಿ ವರ್ಗದವರು ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಸಿಬ್ಬಂದಿ ವರ್ಗ ಹಾಜರಿದ್ದರು. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: