ಮೈಸೂರು

ರಾಗಿ ಖರೀದಿಗೆ ನೋಂದಣಿ ಪ್ರಕ್ರಿಯೆ ಆರಂಭ

ಮೈಸೂರು,ಮೇ.13:- ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ 2021-22ನೇ ಸಾಲಿನಲ್ಲಿ ಹೆಚ್ಚುವರಿಯಾಗಿ ಎರಡು ಲಕ್ಷ ಮೆಟ್ರಿಕ್ ಟನ್ ರಾಗಿ ಖರೀದಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ರಾಗಿ ಖರೀದಿಗೆ ನೋಂದಣಿ ಪ್ರಕ್ರಿಯೆ ಮಂಗಳವಾರದಿಂದಲೇ ಆರಂಭವಾಗಿದ್ದು ಕ್ವಿಂಟಲ್ ಗೆ 3,377ದರದಲ್ಲಿ ಖರೀದಿಸಲಾಗುತ್ತದೆ. ಜಿಲ್ಲೆಯಲ್ಲಿ ಈಗಾಗಲೇ ಒಂಭತ್ತು ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ. 2021-22ನೇ ಸಾಲಿನಲ್ಲಿ ಎಂಎಸ್ ಪಿ ಯೋಜನೆಯಡಿ ಈಗಾಗಲೇ ರಾಗಿ ಮಾರಾಟ ಮಾಡಿರುವ ರೈತರನ್ನು ಹೊರತುಪಡಿಸಿ ಇನ್ನುಳಿದ ರೈತರು ಖರೀದಿ ಕೇಂದ್ರಗಳ ಮೂಲಕ ರಾಗಿ ಮಾರಾಟ ಮಾಡಬಹುದು ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: