
ಕರ್ನಾಟಕಪ್ರಮುಖ ಸುದ್ದಿ
ವಿಧಾನ ಪರಿಷತ್ ನ ಹಂಗಾಮಿ ಸಭಾಪತಿಯಾಗಿ ರಘುನಾಥ್ ಮಲ್ಕಾಪುರೆ ನೇಮಕ
ರಾಜ್ಯ(ಬೆಂಗಳೂರು),ಮೇ.17 : ವಿಧಾನ ಪರಿಷತ್ ನ ಹಂಗಾಮಿ ಸಭಾಪತಿಯಾಗಿ ರಘುನಾಥ್ ಮಲ್ಕಾಪುರೆ ಅವರನ್ನು ನೇಮಕ ಮಾಡಲಾಗಿದೆ.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ರಘುನಾಥ್ ಮಲ್ಕಾಪುರೆ ಅವರನ್ನು ಹಂಗಾಮಿ ಸಭಾಪತಿಯಾಗಿ ನೇಮಿಸಿ ಆದೇಶ ಹೊರಡಿಸಿದ್ದಾರೆ. ಬಸವರಾಜ ಹೊರಟ್ಟಿ ಅವರು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಸಭಾಪತಿ ಸ್ಥಾನ ತೆರವಾಗಿತ್ತು.
ವಿಧಾನ ಪರಿಷತ್ ನ ಹಂಗಾಮಿ ಸಭಾಪತಿ ರಘುನಾಥ್ ಮಲ್ಕಾಪುರೆ ಅವರು ನೇಮಕವಾದ ನಂತರಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಅವರು ಫೋನ್ ಮಾಡಿ ಶುಭಾಶಯ ತಿಳಿಸಿದ್ದಾರೆ.(ಎಸ್.ಎಂ)