ಕರ್ನಾಟಕಪ್ರಮುಖ ಸುದ್ದಿಮೈಸೂರು

ಯಾರು ಯಾವ ಪಕ್ಷಕ್ಕೆ ಹೋಗುತ್ತಾರೆನ್ನುವ ಕುರಿತು ತಲೆಕೆಡಿಸಿಕೊಳ್ಳುವುದಿಲ್ಲ : ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ

ಮೈಸೂರು,ಮೇ.17: – ಯಾರು ಯಾವ ಪಕ್ಷಕ್ಕೆ ಹೋಗುತ್ತಾರೆ ಎನ್ನುವುದರ ಬಗ್ಗೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ. ಎರಡು ಪಕ್ಷಕ್ಕೂ ಸಂಪೂರ್ಣ ಬಹುಮತ ಬರುವ ವಿಶ್ವಾಸವಿಲ್ಲ. ಅದಕ್ಕಾಗಿ ಜೆಡಿಎಸ್ ಮನೆ ಬಾಗಿಲು ತಟ್ಟುತ್ತಿದ್ದಾರೆ ಎಂದು ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ ಹೇಳಿದರು.
ಮೈಸೂರಿನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾವು ಯಾವತ್ತೂ ಒಂದು ಫ್ಯಾಮಿಲಿ ಒಂದು ಟಿಕೆಟ್ ಅಂತ ಹೇಳಿಲ್ಲ. ಕುಟುಂಬ ರಾಜಕಾರಣ ಮೋದಿ ಪ್ರಜಾಪ್ರಭುತ್ವಕ್ಕೆ ಮಾರಕ ಎಂದರು. ಆದರೆ ಬಿಜೆಪಿಯಲ್ಲಿ ನಡೆಯುತ್ತಿರುವುದು ಏನು? ಅದು ಕುಟುಂಬ ರಾಜಕಾರಣನೇ. ಕಾಂಗ್ರೆಸ್ ಮೈಸೂರು ನಾಯಕರೇ ಈ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ಒಂದು ಕುಟುಂಬಕ್ಕೆ ಒಂದು ಟಿಕೆಟ್ ನೀಡುವುದು ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಸಾಧ್ಯವೇ ಇಲ್ಲ ಎಂದರು.

ದಕ್ಷಿಣ ಪದವೀಧರ ಕ್ಷೇತ್ರಕ್ಕೆ ಹೆಚ್.ಕೆ.ರಾಮು ಅಭ್ಯರ್ಥಿಯಾಗಿದ್ದಾರೆ. ಮತದಾರರ ಗಮನ ಸೆಳೆಯುವ ಕುರಿತು ಮೈಸೂರು ಭಾಗದ ಶಾಸಕರು, ಮುಖಂಡರ ಸಭೆ ನಡೆಸುತ್ತೇನೆ. ನಾನು ಸಿಎಂ ಆಗಿದ್ದಾಗ ಪದವೀಧರರಿಗೆ ಅನುಕೂಲವಾಗುವಂತೆ ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಟ್ಟಿದ್ದೆ. 56 ಸಾವಿರ ಪದವೀಧರರಿಗೆ ಉದ್ಯೋಗ, ಪದವಿ ಕಾಲೇಜು ಸ್ಥಾಪನೆ ಮಾಡಿದ್ದೆ . ಕೇಂದ್ರ ಸರ್ಕಾರದ ಪಿಂಚಣಿ ಯೋಜನೆ ಸಾಧಕ ಬಾಧಕ ಬಗ್ಗೆ ಚರ್ಚೆ ಮಾಡಿ ಸರ್ಕಾರಕ್ಕೆ ವರದಿ ನೀಡುವಂತೆ ಸಮಿತಿ ರಚಿಸಿದ್ದೆ. ಇಲ್ಲಿಯವರೆಗೆ ಆ ಬಗ್ಗೆ ಈಗಿನ ಸರ್ಕಾರ ಕ್ರಮ ಕೈಗೊಂಡಿಲ್ಲ ಎಂದರು.
ಮತಾಂತರ ನಿಷೇಧ ಮಸೂದೆ ಜಾರಿಗೆ ರಾಜ್ಯಪಾಲರ ಅಂಕಿತ ವಿಚಾರವಾಗಿ ಮಾತನಾಡಿದ ಅವರು, ನಾವು ಈಗಾಗಲೇ ಈ ಮಸೂದೆಯನ್ನು ವಿರೋಧಿಸಿದ್ದೇವೆ. ಈ ಮಸೂದೆ ಜಾರಿಗೆ ನಮ್ಮ ಸಂಪೂರ್ಣ ವಿರೋಧ ಇದೆ. ಇದರ ಬಗ್ಗೆ ನಮ್ಮ ನಿಲುವು ಸ್ಪಷ್ಟವಾಗಿದೆ ಎಂದರು. (ಕೆ.ಎಸ್,ಎಸ್.ಎಚ್)

 

Leave a Reply

comments

Related Articles

error: