
ಮೈಸೂರು
ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆ ಹಿನ್ನೆಲೆ : ನಾಳೆ ನಾಮಪತ್ರ ಸಲ್ಲಿಸಲಿರುವ ಬಿಜೆಪಿ ಅಭ್ಯರ್ಥಿ
ಮೈಸೂರು,ಮೇ.18:- ದಕ್ಷಿಣ ಪದವೀಧರರ ಕ್ಷೇತ್ರಕ್ಕೆ ಜೂನ್ 13ರಂದು ಚುನಾವಣೆ ನಡೆಯಲಿದ್ದು ನಾಳೆ ಬಿಜೆಪಿ ಅಭ್ಯರ್ಥಿ ಮೈ.ವಿ.ರವಿಶಂಕರ್ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಲಿದ್ದಾರೆ.
ನಾಳೆ ಬೆಳಿಗ್ಗೆ 10.30ಕ್ಕೆ ವಿಜಯನಗರದಲ್ಲಿರುವ ಬಂಟ್ಸ್ ಸಮುದಾಯಭವನದಲ್ಲಿ ಬಿಜೆಪಿ ಸಭೆ ನಡೆಯಲಿದ್ದು, ಸಭೆಯ ಬಳಿಕ ನೇರವಾಗಿ ಚುನಾವಣಾಧಿಕಾರಿಗಳ ಕಛೇರಿಗೆ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ. ಸಭೆಯಲ್ಲಿ ಸಚಿವರುಗಳಾದ ಎಸ್.ಟಿ.ಸೋಮಶೇಖರ್, ವಿ.ಸೋಮಣ್ಣ, ಕೆ.ಗೋಪಾಲಯ್ಯ, ಕೆ.ಸಿ.ನಾರಾಯಣ ಗೌಡ, ಸಂಸದ ಪ್ರತಾಪ್ ಸಿಂಹ, ಶಾಸಕರುಗಳು, ಕಾರ್ಯಕರ್ತರು ಭಾಗಿಯಾಗಲಿದ್ದಾರೆ.
ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಮೇ.26ಕೊನೆಯ ದಿನವಾಗಿದ್ದು, 27ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. 30ರಂದು ಉಮೇದುವಾರಿಕೆ ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಜೂ.13ರಂದು ದಕ್ಷಿಣ ಪದವೀಧರರ ಕ್ಷೇತ್ರದ ವ್ಯಾಪ್ತಿಗೆ ಬರುವ ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ ಜಿಲ್ಲೆಗಳಲ್ಲಿ ಮತದಾನ ನಡೆಯಲಿದೆ.
ಜೂ.15ರಂದು ಮತ ಎಣಿಕೆ ನಡೆಯಲಿದೆ. ಮತದಾರರ ನೋಂದಣಿ ಪಟ್ಟಿಯಲ್ಲಿ ಮೇ.19ರವರೆಗೆ ಮತದಾರರ ಹೆಸರನ್ನು ಸೇರಿಸಲು ಅವಕಾಶ ಕಲ್ಪಿಸಲಾಗಿದೆ. (ಕೆ.ಎಸ್,ಎಸ್.ಎಚ್)