ನಮ್ಮೂರುಮೈಸೂರು

ಮೈಸೂರಿನಲ್ಲಿ ಚಿರತೆ ಪ್ರತ್ಯಕ್ಷ

ಮೈಸೂರು ತಾಲೂಕಿನ ಗೋಪಾಲಪುರದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಇಟ್ಟಿಗೆ ಗೂಡಿನೊಳಗೆ ಅವಿತು ಕುಳಿತಿದ್ದ ಚಿರತೆಯನ್ನು ಕಂಡ ಗ್ರಾಮಸ್ಥರು ಅದು ಹೊರ ಬರದಂತೆ ಇಟ್ಟಿಗೆ ಇಟ್ಟು ಕೂಡಿ ಹಾಕಿದ್ದಾರೆ. ಚಿರತೆಯನ್ನು ನೋಡಲು ಅಕ್ಕಪಕ್ಕದ ಗ್ರಾಮಗಳಿಂದ ಜನರು ಜಮಾಯಿಸಿದ್ದರು.  ಸ್ಥಳಕ್ಕೆ  ಅರಣ್ಯಾಧಿಕಾರಿಗಳು, ಸಿಬ್ಬಂದಿ ಭೇಟಿ ನೀಡಿ ಚಿರತೆ ಸೆರೆಗೆ ಕಾರ್ಯಾಚರಣೆ ನಡೆಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಮೇಲಾಧಿಕಾರಿಗಳು ಬಂದ ನಂತರ ಕಾರ್ಯಾಚರಣೆ ಕೈಗೊಳ್ಳುವುದಾಗಿ ಅರಣ್ಯ ಇಲಾಖೆ ಸಿಬ್ಬಂದಿ ಸಮಜಾಯಿಷಿ ನೀಡಿದ್ದಾರೆ.

Leave a Reply

comments

Related Articles

error: