ಕರ್ನಾಟಕಪ್ರಮುಖ ಸುದ್ದಿ

ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಪ್ರಕಟ : ವಿದ್ಯಾರ್ಥಿನಿಯರದ್ದೇ ಮೇಲುಗೈ

ರಾಜ್ಯ(ಬೆಂಗಳೂರು),ಮೇ.19:-  ರಾಜ್ಯದ 2021-22ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು ಈ ಬಾರಿ ಶೇ. 85.63 ರಷ್ಟು ಫಲಿತಾಂಶ ಬಂದಿದೆ.

ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ರಾಜ್ಯ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಸುದ್ದಿಗೋಷ್ಠಿ ನಡೆಸುವ ಮೂಲಕ   ಎಸ್.ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಪ್ರಕಟಿಸಿದರು. ಒಟ್ಟು 7,30,881 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿರುವುದಾಗಿ ತಿಳಿಸಿದರು.

3,72,279 ಬಾಲಕಿಯರು ಹಾಗೂ 3,58 602 ಬಾಲಕರು ಉತ್ತೀರ್ಣರಾಗಿದ್ದು ಈ ಮೂಲಕ ಶೇ.85.63ರಷ್ಟು ಫಲಿತಾಂಶ ಬಂದಿದ್ದು, ಒಟ್ಟು 145 ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದು ಮೊದಲ ಸ್ಥಾನ ಪಡೆದಿದ್ದಾರೆ. ಇನ್ನು 309 ವಿದ್ಯಾರ್ಥಿಗಳು 625ಕ್ಕೆ 624 ಅಂಕ ಪಡೆಯುವ ಮೂಲಕ 2ನೇ ಸ್ಥಾನ ಪಡೆದಿದ್ದಾರೆ. ರಾಜ್ಯದಲ್ಲಿ 3920 ಶಾಲೆಗಳಿಗೆ ಶೇ.100 ಫಲಿತಾಂಶ ಸಿಕ್ಕಿದ್ದು, 20 ಶಾಲೆಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ ಎಂಬ ಮಾಹಿತಿಯನ್ನು ನೀಡಿದರು.

ಶೇ. 90.29 ರಷ್ಟು ಬಾಲಕಿಯರು, ಶೇ. 81.30 ರಷ್ಟು ಬಾಲಕರು ಪಾಸ್ ಆಗಿದ್ದಾರೆ. ಪರೀಕ್ಷೆಗೆ ಹಾಜರಾಗಿದ್ದವರು 8,53,436 ವಿದ್ಯಾರ್ಥಿಗಳು ಈ ಪೈಕಿ 7,30,881 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.  ಪೂರಕ ಪರೀಕ್ಷೆ ಜೂನ್ 27ರಂದು ನಡೆಯಲಿದೆ.(ಕೆ.ಎಸ್,ಎಸ್.ಎಚ್)

Leave a Reply

comments

Related Articles

error: