ಕರ್ನಾಟಕಪ್ರಮುಖ ಸುದ್ದಿ

ಮೇ 23 ರಂದು ಕಾರ್ಯಾಗಾರ

ರಾಜ್ಯ(ಮಡಿಕೇರಿ) ಮೇ.20:-ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ ಹಾಗೂ ಎಚ್‍ಸಿಎಲ್ ಟೆಕ್ನಾಲಜೀಸ್ ಸಂಸ್ಥೆಯವರ ಸಂಯುಕ್ತ ಆಶ್ರಯದಲ್ಲಿ ಆರಂಭಿಕ ವೃತ್ತಿಜೀವನದ ಕಾರ್ಯಕ್ರಮವಾದ ಟೆಕ್ ಬೀ (Tech Bee) ಯೋಜನೆಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಂಬಂಧ ಮೇ, 23 ರಂದು ಬೆಳಗ್ಗೆ 9 ಗಂಟೆಯಿಂದ ಕುಶಾಲನಗರದ ಅನುಗ್ರಹ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯಾಗಾರ ನಡೆಯಲಿದೆ.
ಈ ಕಾರ್ಯಾಗಾರದಲ್ಲಿ ಎಚ್‍ಸಿಎಲ್ ಟೆಕ್ನಾಲಜೀಸ್ ಅವರು ಟೆಕ್‍ಬೀ ಯೋಜನೆಯ ಅಡಿಯಲ್ಲಿ 2020-21ನೇ ಸಾಲಿನಲ್ಲಿ 12ನೇ ತರಗತಿಯಲ್ಲಿ ಗಣಿತ/ ವ್ಯವಹಾರ ಗಣಿತ ವಿಷಯಗಳನ್ನು ಅಧ್ಯಯನ ಮಾಡಿ ಪಾಸಾದ/ 2021-22ನೇ ಸಾಲಿನ ವಾರ್ಷಿಕ ಪರೀಕ್ಷೆಗೆ ಹಾಜರಾಗಿರುವ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆ ನಡೆಸಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಆಯ್ಕೆಯಾದ ಅಭ್ಯರ್ಥಿಗಳಿಗೆ 12 ತಿಂಗಳ ತರಬೇತಿ, ನಂತರ ಎಚ್‍ಸಿಎಲ್ ಟೆಕ್ನಾಲಜೀಸ್‍ನಲ್ಲಿ ಕೆಲಸ ಹಾಗೂ ಬಿಟ್ಸ್ ಪಿಲಾನಿ, ಶಾಸ್ತ ವಿಶ್ವವಿದ್ಯಾಲಯ ಹಾಗೂ ಅಮೇಥಿ ವಿಶ್ವವಿದ್ಯಾಲಯದಿಂದ ಉನ್ನತ ಶಿಕ್ಷಣ ಪಡೆಯುವ ಅವಕಾಶ ಲಭಿಸಲಿದೆ. 12 ನೇ ತರಗತಿಯಲ್ಲಿ ಗಣಿತ/ ವ್ಯವಹಾರ ಗಣಿತ ವಿಷಯಗಳನ್ನು ಅಧ್ಯಯನ ಮಾಡಿ ಒಟ್ಟಾರೆ ಶೇ.60 ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು ಹಾಗೂ ಗಣಿತ/ ವ್ಯವಹಾರ ಗಣಿತ ವಿಷಯಗಳಲ್ಲಿ ಕನಿಷ್ಟ ಶೇ.50 ಅಂಕ ಪಡೆದಿರಬೇಕು. 2021-22ನೇ ಸಾಲಿನ ವಾರ್ಷಿಕ ಪರೀಕ್ಷೆಗೆ ಹಾಜರಾಗಿರುವ ವಿದ್ಯಾರ್ಥಿಗಳು ವಾರ್ಷಿಕ ಪರೀಕ್ಷೆಯಲ್ಲಿ ಒಟ್ಟಾರೆ ಶೇ.60 ಹಾಗೂ ಗಣಿತ/ವ್ಯವಹಾರ ಗಣಿತ ವಿಷಯಗಳಲ್ಲಿ ಕನಿಷ್ಟ ಶೇ.50 ಅಂಕ ಪಡೆಯುವ ನಿಬಂಧನೆಗಳಿಗೆ ಒಳಪಟ್ಟು ತಾತ್ಕಾಲಿಕವಾಗಿ ಆಯ್ಕೆ ಮಾಡಲಾಗುವುದು.
ಜಿಲ್ಲೆಯ ಪಿಯುಸಿ ವಿದ್ಯಾರ್ಥಿಗಳಿಗೆ ಇದೊಂದು ಸುವರ್ಣಾವಕಾಶವಾಗಿದ್ದು, 10ನೇ ತರಗತಿ ಅಂಕಪಟ್ಟಿ, ಆಧಾರ ಕಾರ್ಡ್, ಪ್ರಥಮ ಪಿಯುಸಿ/ ದ್ವಿತೀಯ ಅಂಕಪಟ್ಟಿಯ ಪ್ರತಿಗಳೊಂದಿಗೆ ಹಾಜರಾಗುವ ಮೂಲಕ ಈ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಳ್ಳಬಹುದು. ಈ ಆಯ್ಕೆ ಪ್ರಕ್ರಿಯೆಯಲ್ಲಿ ಹಾಜರಾಗ ಬಯಸುವ ವಿದ್ಯಾರ್ಥಿಗಳು https://bit.ly/hcltechbeeworkshop ಲಿಂಕ್ ಅನ್ನು ಬಳಸಿಕೊಂಡು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ 7019307267, 7619292747, 9845454471 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಉಮಾ ಅವರು ತಿಳಿಸಿದ್ದಾರೆ. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: