ಕರ್ನಾಟಕಪ್ರಮುಖ ಸುದ್ದಿ

ಇಂದು ರೆಡ್ ಕ್ರಾಸ್ ಸೊಸೈಟಿಯ ನೂತನ ಶತಮಾನೋತ್ಸವ ಭವನ ಉದ್ಘಾಟನೆ

ರಾಜ್ಯ(ಮಡಿಕೇರಿ) ಮೇ.20:- ಭಾರತೀಯ ರೆಡ್‍ಕ್ರಾಸ್ ಸೊಸೈಟಿ ವತಿಯಿಂದ ರೆಡ್ ಕ್ರಾಸ್ ಸೊಸೈಟಿ ನೂತನ ಶತಮಾನೋತ್ಸವ ಭವನ ಉದ್ಘಾಟನಾ ಸಮಾರಂಭವು ಮೇ, 20 ರಂದು ಬೆಳಗ್ಗೆ 10 ಗಂಟೆಗೆ ನಗರದ ಶತಮಾನೋತ್ಸವ ಭವನದಲ್ಲಿ ನಡೆಯಲಿದೆ.
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ನಾಗೇಶ್ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷರು ಹಾಗೂ ಶಾಸಕರಾದ ಕೆ.ಜಿ.ಬೋಪಯ್ಯ, ಕರ್ನಾಟಕ ರಾಜ್ಯ ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆ ಸಮಿತಿ ಅಧ್ಯಕ್ಷರಾದ ರವಿಕುಶಾಲಪ್ಪ, ಸಂಸದರಾದ ಪ್ರತಾಪ್‍ಸಿಂಹ, ಕಾನೂನು ಮಾಜಿ ಸಚಿವರಾದ ಎಂ.ಸಿ.ನಾಣಯ್ಯ, ಶಾಸಕರಾದ ವೀಣಾ ಅಚ್ಚಯ್ಯ, ಎಂ.ಪಿ.ಸುಜಾ ಕುಶಾಲಪ್ಪ, ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ.ಅಯ್ಯಪ್ಪ, ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ವೆಂಕಟೇಶ್, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಡೀನ್ ಮತ್ತು ನಿರ್ದೇಶಕರಾದ ಡಾ.ಕಾರ್ಯಪ್ಪ, ಕರ್ನಾಟಕ ರೆಡ್ ಕ್ರಾಸ್ ಸಭಾಪತಿ ವಿಜಯಕುಮಾರ್ ಪಾಟೀಲ್, ಕೊಡಗು ರೆಡ್ ಕ್ರಾಸ್ ಸೊಸೈಟಿಯ ಉಪಸಭಾಪತಿ ಎಂ.ಸುರೇಶ್ ಚಂಗಪ್ಪ, ಕರ್ನಾಟಕ ರಾಜ್ಯ ರೆಡ್ ಕ್ರಾಸ್ ಉಪಸಭಾಪತಿ ಆನಂದ್ ಜಿಗಜಿನ್ನಿ, ಕೊಡಗು ರೆಡ್ ಕ್ರಾಸ್ ಸೊಸೈಟಿಯ ಸಭಾಪತಿ ಬಿ.ಕೆ.ರವೀಂದ್ರ ರೈ, ಕೊಡಗು ರೆಡ್‍ಕ್ರಾಸ್ ಸೊಸೈಟಿಯ ಉಪಸಭಾಪತಿ ಅನಿಲ್ ಎಚ್.ಟಿ., ಪ್ರಧಾನ ಕಾರ್ಯದರ್ಶಿ ಮುರಳೀಧರ್ ಎಚ್.ಆರ್., ಕೋಶಾಧಿಕಾರಿ ಶ್ಯಾಂ ಜೊಸೇಫ್ ಇತರರು ಪಾಲ್ಗೊಳ್ಳಲಿದ್ದಾರೆ. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: