ಕರ್ನಾಟಕಪ್ರಮುಖ ಸುದ್ದಿ

ವಿಕಲಚೇತನ ಫಲಾನುಭವಿಗಳಿಗೆ ಯಂತ್ರಚಾಲಿತ ದ್ವಿಚಕ್ರವಾಹನ ವಿತರಣೆ

ರಾಜ್ಯ(ದಾವಣಗೆರೆ) ಮೇ.20 :- ಮಾಯಕೊಂಡ ವಿಧಾನಸಭಾ ಕ್ಷೇತ್ರದ ಶಾಸಕರಾದ ಪ್ರೊ.ಎನ್.ಲಿಂಗಣ್ಣ ಇವರ 2021-22ನೇ ಸಾಲಿನ ವಿಧಾನಸಭಾ ಕ್ಷೇತ್ರದ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ಅನುದಾನದಡಿ ಆಯ್ಕೆಯಾದ 05 ಜನ ದೈಹಿಕ ವಿಕಲಚೇತನ ಫಲಾನುಭವಿಗಳಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ(ರೆಟ್ರೋಫಿಟ್ ಸಹಿತ) ಗಳನ್ನು ಗುರುವಾರ ನಗರದ ದೇವರಾಜ್ ಅರಸ್ ಬಡಾವಣೆ ಬಿ.ಬ್ಲಾಕ್ ಹತ್ತಿರ ಇರುವ ಅಂಧ ಮಕ್ಕಳ ಸರ್ಕಾರಿ ಪಾಠ ಶಾಲಾ ಆವರಣದಲ್ಲ್ಲಿ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ಡಾ.ಕೆ.ಕೆ ಪ್ರಕಾಶ್, ಸಿಬ್ಬಂದಿ ದುರ್ಗೆಶ್, ಸೈಯದ್, ಮಾರುತಿ ಹಾಗೂ ಫಲಾನುಭವಿಗಳು ಹಾಜರಿದ್ದರು. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: