ಮೈಸೂರು

ಎಸ್.ಎಸ್.ಎಲ್.ಸಿ. ಸಾಧಕರಿಗೆ ಅಭಿನಂದನೆ ಸಲ್ಲಿಸಿದ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್

ಮೈಸೂರು, ಮೇ.19:- ಎಸ್.ಎಸ್.ಎಲ್.ಸಿ. ಸಾಧಕರಿಗೆ ಅಭಿನಂದನೆ ಸಲ್ಲಿಸಿದ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಅಭಿನಂದನೆ ಸಲ್ಲಿಸಿದರು.

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಮೈಸೂರು ಜಿಲ್ಲೆಗೆ ಉತ್ತಮ ಫಲಿತಾಂಶ ಬಂದಿದ್ದು, ಜಿಲ್ಲೆಗೆ ‘ಎ’ ಶ್ರೇಣಿ ಲಭಿಸಿರುವುದು ಹೆಮ್ಮೆಯ ವಿಚಾರವಾಗಿದೆ. ಅದರಲ್ಲಿ ಹೆಣ್ಣುಮಕ್ಕಳೆ ಮೇಲುಗೈ ಸಾಧಿಸಿರುವುದು ಹೆಚ್ಚಿನ ಸಂತೋಷ ಉಂಟುಮಾಡಿದೆ. ಈ ಸಾಧನೆ ಮಾಡಿದ ಎಲ್ಲಾ ವಿದ್ಯಾರ್ಥಿಗಳಿಗೆ ತುಂಬು ಹೃದಯದ ಅಭಿನಂದನೆಗಳು.

ಕಳೆದ ಎರಡು ವರ್ಷಗಳಿಗೆ ಹೋಲಿಸಿದರೆ ಈ ಬಾರಿ ಉತ್ತಮ ಫಲಿತಾಂಶ ಬಂದಿದ್ದು, ಜಿಲ್ಲೆಯಲ್ಲಿ 36,128 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಈ ಪೈಕಿ 33,012 ಮಕ್ಕಳು ಉತ್ತೀರ್ಣರಾಗಿದ್ದು, ಶೇ‌ 91.38ರಷ್ಟು ಫಲಿತಾಂಶ ಬಂದಿದೆ. ವಿದ್ಯಾರ್ಥಿಗಳಿಗೆ ಉತ್ತಮ ಮಾರ್ಗದರ್ಶನ ನೀಡಿದ ಶಿಕ್ಷಕರು ಹಾಗೂ ಆತ್ಮಸ್ಥೈರ್ಯ ತುಂಬಿದ ಪೋಷಕರಿಗೂ ಈ ಫಲಿತಾಂಶದ ಶ್ರೇಯಸ್ಸು ಸಲ್ಲಬೇಕು ಎಂದರು.

ಜಿಲ್ಲೆಯಲ್ಲಿ 6 ಮಕ್ಕಳು 625ಕ್ಕೆ 625 ಅಂಕ ಪಡೆದಿರುವುದು ಹೆಮ್ಮೆಯ ಸಂಗತಿಯಾಗಿದೆ. ಒಟ್ಟು 18,100 ಬಾಲಕರು ಪರೀಕ್ಷೆ ಬರೆದಿದ್ದರು. ಅದರಲ್ಲಿ 16,114 ಮಕ್ಕಳು ಉತ್ತೀರ್ಣರಾಗಿದ್ದಾರೆ. 18,028 ಬಾಲಕಿಯರಲ್ಲಿ 16,898 ಮಂದಿ ಉತ್ತೀರ್ಣರಾಗಿದ್ದಾರೆ.

ಮೈಸೂರಿನ ಆದರ್ಶ ಶಾಲೆಯ ವಿದ್ಯಾರ್ಥಿನಿ ಏಕ್ತಾ ಎಂ. ಜಿ, ಮರಿಮಲ್ಲಪ್ಪ ಶಾಲೆಯ ಚಾರುಕೀರ್ತಿ, ಸದ್ವಿದ್ಯ ಶಾಲೆಯ ಅದಿತಿ, ಯಶಸ್ವಿನಿ ಅರಸ್, ನಂಜನಗೂಡಿನ ಕಾರ್ಮೆಲ್ ಶಾಲೆಯ ದೇವಿಕಾ, ಬನ್ನೂರಿ‌ನ ಆದಿಚುಂಚನಗಿರಿ ಶಾಲೆಯ ದಿಶಾ ಶೇ. 100ಕ್ಕೆ ನೂರು ಅಂಕ ಪಡೆದಿದ್ದು, ಮೈಸೂರಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ‌.

ಈ ಬಾರಿ ಸರ್ಕಾರಿ ಶಾಲೆ ಹಾಗೂ ಗ್ರಾಮೀಣ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿರುವುದು ಗಮನಾರ್ಹ. ಶೇ. 92.87 ಗ್ರಾಮೀಣ ಭಾಗದ ಮಕ್ಕಳು ಉತ್ತೀರ್ಣರಾಗಿದ್ದು, ಈ ಮೂಲಕ ಗ್ರಾಮೀಣ ಪ್ರದೇಶ ಮಕ್ಕಳು ಜಿಲ್ಲೆಯಲ್ಲಿ ಮೇಲುಗೈ ಸಾಧಿಸಿದ್ದಾರೆ. ಶೇ. 89.54 ನಗರದ ಪ್ರದೇಶ ಮಕ್ಕಳು ಉತ್ತೀರ್ಣರಾಗಿದ್ದಾರೆ. ಒಟ್ಟು 117 ಶಾಲೆಗಳಲ್ಲಿ ಶೇ.100 ರಷ್ಟು ಫಲಿತಾಂಶ ಬಂದಿದೆ.

ಉತ್ತೀರ್ಣರಾಗಿರುವ ವಿದ್ಯಾರ್ಥಿಗಳ ಮುಂದಿನ ಶೈಕ್ಷಣಿಕ ಜೀವನ ಉತ್ತಮವಾಗಿರಲಿ ಹಾಗೂ ಉನ್ನತ ಭವಿಷ್ಯಕ್ಕಾಗಿ ಹೆಚ್ಚಿನ ವಿದ್ಯಾಭ್ಯಾಸಕ್ಕೆ ತೊಡಗಿಕೊಳ್ಳಲಿ ಎಂದು ಹಾರೈಸುತ್ತೇನೆ. ಅನುತ್ತೀರ್ಣರಾದ ವಿದ್ಯಾರ್ಥಿಗಳೂ ಎದೆಗುಂದದೆ ಸೋಲೇ ಗೆಲುವಿನ ಮೆಟ್ಟಿಲು ಎಂದು ಭಾವಿಸಿ ಮುಂದಿನ ಪೂರಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಲಿ ಎಂದು ಬಯಸುತ್ತೇನೆ ಎಂದರು. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: