ಕರ್ನಾಟಕಪ್ರಮುಖ ಸುದ್ದಿ

ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ರೆಡ್ ಹ್ಯಾಂಡ್ ಆಗಿ ಬಂಧಿಸಿದ ಕೂಡ್ಲಿಗಿ ಪೊಲೀಸರು

ರಾಜ್ಯ(ವಿಜಯನಗರ),ಮೇ.20 : ಅಂತರ ಜಿಲ್ಲಾ ಕಳ್ಳನೊಬ್ಬನನ್ನು ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪೊಲೀಸರು ನಿರಂತರ ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಹೆಚ್.ಹನುಮಂತ (23) ಬಂಧಿತ ಆರೋಪಿ. ವಿಜಯಪುರ ಜಿಲ್ಲೆಯ ಕೂಡ್ಲಿಗಿ ತಾಲೂಕಿನಲ್ಲಿ ಕಳೆದ ಒಂದು ತಿಂಗಳಲ್ಲಿ ಎರಡು ಮನೆ ಕಳ್ಳತನವಾಗಿದ್ದ ಹಿನ್ನಲೆಯಲ್ಲಿ  ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಲು ವಿಶೇಷ ತಂಡವೊಂದನ್ನು ರಚಸಿ, ಆರೋಪಿಯ ಪತ್ತೆಗೆ ಜಾಲ ಬೀಸಿದ್ದರು.

ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿ ಕೂಡ್ಲಿಗಿ ಪಟ್ಟಣದಲ್ಲಿ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಕೂಡ್ಲಿಗಿ ಪಟ್ಟಣದಲ್ಲಿ ಒಟ್ಟು ಮೂರು ಮನೆಗಳನ್ನು ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ.

ಆರೋಪಿಯಿಂದ ಒಟ್ಟು 93 ಗ್ರಾಂ. ಬಂಗಾರದ ಆಭರಣಗಳು, 103 ಗ್ರಾಂ. ಬೆಳ್ಳಿಯ ಆಭರಣಗಳು ಮತ್ತು 2,600 ರೂ. ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಒಟ್ಟು ವಶಪಡಿಸಿಕೊಂಡ ಕಳುವುಗೈದ ಮೌಲ್ಯ 4,46,090 ರೂಪಾಯಿ ವಶಕ್ಕೆ ಪಡೆಯಲಾಗಿದೆ. ಅಲ್ಲದೇ ಆರೋಪಿಯು ಸಿರುಗುಪ್ಪ ಠಾಣೆಯ ಪ್ರಕರಣದಲ್ಲಿ ಸಹ ಭಾಗಿಯಾಗಿರುವ ಬಗ್ಗೆ ತನಿಖೆಯಲ್ಲಿ ತಿಳಿದು ಬಂದಿದೆ. ತನಿಖೆ ನಂತರ ಆರೋಪಿತನನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.(ಎಸ್.ಎಂ)

Leave a Reply

comments

Related Articles

error: