ಕ್ರೀಡೆದೇಶಪ್ರಮುಖ ಸುದ್ದಿ

ಇಂದು ಐಪಿಎಲ್ ನಲ್ಲಿ ರಾಜಸ್ತಾನ್ ರಾಯಲ್ಸ್-ಚೆನ್ನೈ ಸೂಪರ್ ಕಿಂಗ್ಸ್ ಮುಖಾಮುಖಿ

ದೇಶ(ಮುಂಬೈ),ಮೇ.20:- ಐಪಿಎಲ್ 2022 ರ 68 ನೇ ಪಂದ್ಯ ಇಂದು ರಾಜಸ್ಥಾನ ರಾಯಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆಯಲಿದೆ.
ಸದ್ಯ ರಾಜಸ್ಥಾನ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಈ ಸೀಸನ್ ನಲ್ಲಿ ಅವರು ಅದ್ಭುತ ಪ್ರದರ್ಶನ ನೀಡಿದ್ದಾರೆ. ಪ್ಲೇಆಫ್‌ ನಲ್ಲಿ ಸ್ಥಾನ ಪಡೆಯಲು ಅವರು ಯಾವುದೇ ಬೆಲೆ ತೆತ್ತಾದರೂ ಈ ಪಂದ್ಯವನ್ನು ಗೆಲ್ಲಲೇಬೇಕು. ಈ ಪಂದ್ಯದಲ್ಲಿ ತಂಡ ಸೋತರೆ ಪ್ಲೇ ಆಫ್‌ ಹಂತಕ್ಕೇರುವುದು ಕಷ್ಟಸಾಧ್ಯ. ಆದರೆ ಈಗ ಚೆನ್ನೈ ಟೂರ್ನಿಯಿಂದ ಹೊರಬಿದ್ದಿದೆ. ಇದು ಅವರ ಕೊನೆಯ ಲೀಗ್ ಪಂದ್ಯ. ಈ ಪಂದ್ಯಕ್ಕಾಗಿ ಅವರು ಪ್ಲೇಯಿಂಗ್ XI ನಲ್ಲಿ ಬದಲಾವಣೆಗಳನ್ನು ಮಾಡಬಹುದು.
ಚೆನ್ನೈನ ಕೊನೆಯ ಪಂದ್ಯ ಗುಜರಾತ್ ಟೈಟಾನ್ಸ್ ವಿರುದ್ಧವಾಗಿತ್ತು. ಈ ಪಂದ್ಯದಲ್ಲಿ 7 ವಿಕೆಟ್‌ ಗಳಿಂದ ಸೋಲು ಅನುಭವಿಸಬೇಕಾಯಿತು. ಈ ಪಂದ್ಯಕ್ಕಾಗಿ ಪ್ಲೇಯಿಂಗ್ XI ನಲ್ಲಿ ಅನುಭವಿ ಆಟಗಾರರಾದ ರಾಬಿನ್ ಉತ್ತಪ್ಪ ಮತ್ತು ಅಂಬಟಿ ರಾಯುಡು ಅವರಿಗೆ ಚೆನ್ನೈ ಸ್ಥಾನ ನೀಡಲಿಲ್ಲ. ಆದರೆ ಈ ಇಬ್ಬರೂ ಆಟಗಾರರು ಮರಳುವ ಸಾಧ್ಯತೆ ಇದೆ. ಚೆನ್ನೈ ಟೂರ್ನಿಯಿಂದ ಹೊರಬಿದ್ದಿದೆ. ಆದರೆ ಅವರು ಈ ಸೀಸನ್ ನ್ನು ಗೆಲುವಿನೊಂದಿಗೆ ಕೊನೆಗೊಳಿಸಲು ಬಯಸುತಿದ್ದಾರೆ ಎನ್ನಲಾಗಿದೆ.
ರಾಜಸ್ಥಾನ್ ರಾಯಲ್ಸ್ ತಂಡದಲ್ಲಿ ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್ (ಸಿ & ಡಬ್ಲ್ಯೂ), ದೇವದತ್ ಪಡಿಕ್ಕಲ್, ಶಿಮ್ರೋನ್ ಹೆಟ್ಮೆಯರ್, ರಿಯಾನ್ ಪರಾಗ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಪ್ರಣಂದೇಶ್ ಕೃಷ್ಣ, ಯುಜ್ವೇಂದ್ರ ಚಾಹಲ್, ಒಬೆದ್ ಮೆಕಾಯ್
ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ರಿತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ರಾಬಿನ್ ಉತ್ತಪ್ಪ, ಮೊಯಿನ್ ಅಲಿ, ಶಿವಂ ದುಬೆ, ಅಂಬಟಿ ರಾಯುಡು, ಎಂಎಸ್ ಧೋನಿ (ಸಿ&ಡಬ್ಲ್ಯು), ಮಿಚೆಲ್ ಸ್ಯಾಂಟ್ನರ್, ಪ್ರಶಾಂತ್ ಸೋಲಂಕಿ, ಮತಿಶಾ ಪಥಿರಾನಾ, ಮುಖೇಶ್ ಚೌಧರಿ ಇರುವ ಸಾಧ್ಯತೆ ಇದೆ ಎನ್ನಲಾಗಿದೆ. (ಏಜೆನ್ಸೀಸ್,ಎಸ್.ಎಚ್)

Leave a Reply

comments

Related Articles

error: