ಕರ್ನಾಟಕಪ್ರಮುಖ ಸುದ್ದಿ

ಗೃಹಬಳಕೆಯ ಎಲ್‍ಪಿಜಿ ಸಿಲಿಂಡರ್ ಸ್ಫೋಟ : ಓರ್ವ ಸಾವು

ರಾಜ್ಯ(ಚಿಕ್ಕಬಳ್ಳಾಪುರ),ಮೇ.20 : ಗೃಹಬಳಕೆಯ ಎಲ್‍ಪಿಜಿ ಸಿಲಿಂಡರ್ ಸ್ಫೋಟಗೊಂಡು ಇಡೀ ಮನೆಯೇ ಸಂಪೂರ್ಣ ಛಿದ್ರ, ಛಿದ್ರವಾಗಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಚೇಳೂರು ಬಳಿಯ ಮ್ಯಾಕಲಪಲ್ಲಿ ಗ್ರಾಮದಲ್ಲಿ ನಡೆದಿದೆ.

ಮೃತ ದುರ್ದೈವಿಯನ್ನು ಲಕ್ಷಣ್(65) ಎಂದು ಗುರುತಿಸಲಾಗಿದ್ದು, ಗ್ರಾಮದ ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಅಲುವೇಲಮ್ಮ ಅವರ ಮನೆಯಲ್ಲಿ ಘಟನೆ ಸಂಭವಿಸಿದೆ. ಅಲುವೇಲಮ್ಮ ಪತಿ ಲಕ್ಷಣ್ ಅವರು ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದರಿಂದ ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯದಲ್ಲಿಯೇ ಪ್ರಾಣ ಬಿಟ್ಟಿದ್ದಾರೆ.

ಘಟನೆ ವೇಳೆ ಅಲುವೇಲಮ್ಮ ಅವರು ಮನೆಯ ಮುಂದೆ ಸಾರಿಸಲು ಸಗಣಿ ತರಲು ಹೋಗಿದ್ದರಿಂದ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದೀಗ ಚೇಳೂರು  ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.(ಎಸ್.ಎಂ)

Leave a Reply

comments

Related Articles

error: