ಕರ್ನಾಟಕಪ್ರಮುಖ ಸುದ್ದಿ

ವಿಧಾನಪರಿಷತ್ ಚುನಾಚಣೆಯ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಸೋಮವಾರ ಬಿಡುಗಡೆ

ರಾಜ್ಯ(ಬೆಂಗಳೂರು),ಮೇ.20 : ಜೂನ್‌ನಲ್ಲಿ ನಡೆಯಲಿರುವ ವಿಧಾನಪರಿಷತ್ ಮತ್ತು ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಪಟ್ಟಿ ಸೋಮವಾರ ಕೆಪಿಸಿಸಿ ಬಿಡುಗಡೆ ಮಾಡಲಿದೆ.

ಈ ಸಂಬಂಧ ಹೈಕಮಾಂಡ್ ಜೊತೆ ಚರ್ಚಿಸಲು ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಾಳೆ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ

ಜೂನ್ 3 ರಂದು ವಿಧಾನಸಭೆಯಿಂದ ವಿಧಾನಪರಿಷತ್ 7 ಸ್ಥಾನಗಳಿಗೆ ನಡೆಯುವ ದ್ವೈವಾರ್ಷಿಕ ಚುನಾವಣೆಗೆ ಪಕ್ಷ ಇಬ್ಬರು ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ನಾಮಪತ್ರ ಸಲ್ಲಿಸಲು ಮೇ 24 ಅಂದರೆ ಇದೇ ಮಂಗಳವಾರ ಅಂತಿಮ ದಿನವಾಗಿದ್ದು, ಸೋಮವಾರದೊಳಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಬೇಕಿದೆ.

ಅದೇ ರೀತಿ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಗೆಲ್ಲಬಹುದಾದ ಒಂದು ಸ್ಥಾನಕ್ಕೂ ಅಭ್ಯರ್ಥಿಯ ಆಯ್ಕೆ ಮಾಡಬೇಕಿದೆ. ಜೂನ್ 10 ರಂದು ನಡೆಯುವ ಚುನಾವಣೆಗೆ ಮೇ 31 ನಾಮಪತ್ರ ಸಲ್ಲಿಸಲು ಕೊನೆಯ ದಿನ. ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಕಾಂಗ್ರೆಸ್ಸಿನ ಮಹತ್ವದ ಸಭೆ ನಡೆಯಲಿದ್ದು, ಸಿದ್ದರಾಮಯ್ಯ ಹಾಗೂ ಡಿಕೆಶಿವಕುಮಾರ್ ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಸಮಾಲೋಚನೆ ಬಳಿಕ ಕಾಂಗ್ರೆಸ್ ಹೈಕಮಾಂಡ್ ಸೋಮವಾರ ಕಣಕ್ಕಿಳಿಯುವ ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆ ಮಾಡಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. (ಎಸ್.ಎಂ)

Leave a Reply

comments

Related Articles

error: