ಕರ್ನಾಟಕಪ್ರಮುಖ ಸುದ್ದಿ

ಮೇ 21 ರಂದು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪದವಿ ತರಗತಿ ಇಲ್ಲ

ರಾಜ್ಯ(ಮಡಿಕೇರಿ) ಮೇ.20:-ಪದವೀಧರ ಪಾಥಮಿಕ ಶಿಕ್ಷಕರ ಆಯ್ಕೆಯ ಸ್ಪರ್ಧಾತ್ಮಕ ಪರೀಕ್ಷೆಯು ಮೇ, 21 ಮತ್ತು 22 ರಂದು ಸರ್ಕಾರಿ ಪದವಿ ಪೂರ್ವ ಕಾಲೇಜು, ಮಡಿಕೇರಿ(ಫ್ರೌಢಾಶಾಲಾ ವಿಭಾಗ) ಇಲ್ಲಿ ನಡೆಯಲಿದೆ. ಆ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಅವರ ಆದೇಶದಂತೆ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ನಿರ್ಬಂಧಿತ ಸ್ಥಳ ಎಂದು ಘೋಷಿಸಿರುವುದರಿಂದ ಮೇ, 21 ರಂದು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ತರಗತಿ ಇರುವುದಿಲ್ಲ. ಮೇ, 23 ರಂದು ಎಂದಿನಂತೆ ತರಗತಿಗಳು ನಡೆಯಲಿವೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು ತಿಳಿಸಿದ್ದಾರೆ. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: