ಕ್ರೀಡೆದೇಶಪ್ರಮುಖ ಸುದ್ದಿ

ಸಿಎಸ್ ಕೆ ವಿರುದ್ಧ ಐದು ವಿಕೆಟ್ ಗಳಿಂದ ರೋಚಕ ಗೆಲುವು ಸಾಧಿಸಿದ ರಾಜಸ್ಥಾನ್ ರಾಯಲ್ಸ್ : ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ

ದೇಶ(ನವದೆಹಲಿ),ಮೇ.21:- ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2022 ರಲ್ಲಿ ಶುಕ್ರವಾರ ರಾತ್ರಿ ನಡೆದ ಪಂದ್ಯದ ನಂತರ ರಾಜಸ್ಥಾನ್ ರಾಯಲ್ಸ್ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಏರಿದೆ.
ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 5 ವಿಕೆಟ್‌ ಗಳಿಂದ ರೋಚಕ ಗೆಲುವು ಸಾಧಿಸುವ ಮೂಲಕ ರಾಜಸ್ಥಾನ ಈ ಸ್ಥಾನವನ್ನು ಸಾಧಿಸಿದೆ. ಇದು ಲೀಗ್ ಹಂತದಲ್ಲಿ ರಾಜಸ್ಥಾನಕ್ಕೆ 9ನೇ ಜಯವಾಗಿದೆ. ಲಕ್ನೋ ಸೂಪರ್ ಜೈಂಟ್ಸ್ ಕೂಡ ಲೀಗ್ ಹಂತದಲ್ಲಿ ಅಷ್ಟೇ ಸಂಖ್ಯೆಯ ಪಂದ್ಯಗಳನ್ನು ಗೆದ್ದಿದೆ ಆದರೆ ಅವರ ನಿವ್ವಳ ರನ್ ರೇಟ್ ರಾಜಸ್ಥಾನಕ್ಕಿಂತ ಕಡಿಮೆಯಾಗಿದೆ.
ಇದೀಗ ಪಾಯಿಂಟ್ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿ ಗುಜರಾತ್ ಟೈಟಾನ್ಸ್, ಎರಡನೇ ಸ್ಥಾನದಲ್ಲಿ ರಾಜಸ್ಥಾನ್ ರಾಯಲ್ಸ್, ಲಕ್ನೋ ಸೂಪರ್ ಜೈಂಟ್ಸ್, ನಾಲ್ಕರಲ್ಲಿ ಆರ್ ಸಿಬಿ, ಐದರಲ್ಲಿ ಡೆಲ್ಲಿ ಕ್ಯಾಪಿಟಲ್ಸ್, ಆರರಲ್ಲಿ ಕೆಕೆಆರ್, ಏಳರಲ್ಲಿ ಪಿಬಿಕೆಎಸ್, ಎಂಟರಲ್ಲಿ ಹೈದ್ರಾಬಾದ್ ಸನ್ ರೈಸರ್ಸ್, ಒಂಭತ್ತರಲ್ಲಿ ಚೆನ್ನೈ ಸೂಪರ್ ಕಿಂಗ್ಸ್, ಹತ್ತರಲ್ಲಿ ಮುಂಬೈ ಇಂಡಿಯನ್ಸ್ ಇದೆ. (ಏಜೆನ್ಸೀಸ್,ಎಸ್.ಎಚ್)

Leave a Reply

comments

Related Articles

error: