
ಮೈಸೂರು
ಮಾಜಿ ಪ್ರಧಾನಿ ದಿ.ರಾಜೀವ್ ಗಾಂಧಿ ಪುಣ್ಯಸ್ಮರಣೆ : ಪುಷ್ಪನಮನ
ಮೈಸೂರು,ಮೇ.21:- ಮೈಸೂರು ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೆ ಪ್ರಯುಕ್ತ ಕಾಂಗ್ರೆಸ್ ಭವನದಲ್ಲಿಂದು ಮಹಾಸ್ಮರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಆರ್.ಧೃವನಾರಾಯಣ್ ಮಾಜಿ ಪ್ರಧಾನಿ ದಿ.ರಾಜೀವ್ ಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ನಗರಾಧ್ಯಕ್ಷರಾದ ಆರ್.ಮೂರ್ತಿ, ಗ್ರಾಮಾಂತರ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ಮಾಜಿ ಶಾಸಕರುಗಳು ಮತ್ತು ಕೆಪಿಸಿಸಿ ಪದಾಧಿಕಾರಿಗಳು ಭಾಗವಹಿಸಿದ್ದರು. (ಕೆ.ಎಸ್,ಎಸ್.ಎಚ್)