ಕ್ರೀಡೆದೇಶಪ್ರಮುಖ ಸುದ್ದಿ

ಸನ್‌ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ 5 ವಿಕೆಟ್‌ ಗಳಿಂದ ಗೆದ್ದ  ಪಂಜಾಬ್ ಕಿಂಗ್ಸ್

ದೇಶ(ಮುಂಬೈ),ಮೇ.23:- ಐಪಿಎಲ್ 2022ರ ಕೊನೆಯ ಲೀಗ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ 5 ವಿಕೆಟ್ ಗಳ ಜಯ ಸಾಧಿಸಿದೆ.

ಮೊದಲು ಬ್ಯಾಟಿಂಗ್ ಮಾಡಿದ ಹೈದರಾಬಾದ್ 158 ರನ್ ಗಳ ಟಾರ್ಗೆಟ್ ನೀಡಿತ್ತು. ಇದಕ್ಕೆ ಉತ್ತರವಾಗಿ ಪಂಜಾಬ್ 15.1 ಓವರ್‌ಗಳಲ್ಲಿ ಗುರಿ ತಲುಪಿತು. ಪಂಜಾಬ್ ಪರ ಲಿಯಾಮ್ ಲಿವಿಂಗ್‌ ಸ್ಟೋನ್ ಬಿರುಸಿನ ಬ್ಯಾಟಿಂಗ್ ಮಾಡಿದರು. ಅವರು ಕೇವಲ 22 ಎಸೆತಗಳಲ್ಲಿ 49 ರನ್ ಗಳಿಸಿದರು. ಅದೇ ಸಮಯದಲ್ಲಿ, ಹರ್ಪ್ರೀತ್ ಬ್ರಾರ್ ಬೌಲಿಂಗ್ ನಲ್ಲಿ ಅದ್ಭುತ ಪ್ರದರ್ಶನ ನೀಡಿದರು. 26 ರನ್ ನೀಡಿ 3 ವಿಕೆಟ್ ಪಡೆದರು.

 

ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಹೈದರಾಬಾದ್ 157 ರನ್ ಗಳಿಸಿತು. ಇದಕ್ಕೆ ಪ್ರತಿಯಾಗಿ  ಜಾನಿ ಬೈರ್‌ ಸ್ಟೋವ್ ಮತ್ತು ಶಿಖರ್ ಧವನ್ ಪಂಜಾಬ್‌ ಗೆ ಓಪನಿಂಗ್ ಮಾಡಿದರು. 32 ಎಸೆತಗಳನ್ನು ಎದುರಿಸಿದ ಧವನ್ ಎರಡು ಬೌಂಡರಿ ಹಾಗೂ ಎರಡು ಸಿಕ್ಸರ್ ನೆರವಿನಿಂದ 39 ರನ್ ಗಳಿಸಿದರು. 15 ಎಸೆತಗಳಲ್ಲಿ 23 ರನ್ ಗಳಿಸಿದ ನಂತರ ಬೈರ್‌ಸ್ಟೋವ್ ಔಟಾದರು. ಶಾರುಖ್ ಖಾನ್ 10 ಎಸೆತಗಳಲ್ಲಿ 19 ರನ್ ಗಳಿಸಿ ಪೆವಿಲಿಯನ್ ಗೆ ಮರಳಿದರು. ನಾಯಕ ಮಯಾಂಕ್ ಅಗರ್ವಾಲ್ ಕೇವಲ ಒಂದು ರನ್ ಗಳಿಸಲಷ್ಟೇ ಶಕ್ತರಾದರು. ಜಿತೇಶ್ ಶರ್ಮಾ 3 ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದ 19 ರನ್ ಗಳಿಸಿದರು.

ಕೊನೆಯಲ್ಲಿ  ಲಿವಿಂಗ್ಸ್ಟೋನ್ ಬಿರುಸಿನ ಬ್ಯಾಟಿಂಗ್ ಮಾಡಿದರು. ಅವರು 22 ಎಸೆತಗಳಲ್ಲಿ 5 ಸಿಕ್ಸರ್ ಮತ್ತು 2 ಬೌಂಡರಿಗಳ ಸಹಾಯದಿಂದ 49 ರನ್ ಗಳಿಸಿದರು. ಪ್ರೇರಕ್ ಮಂಕಡ್ 4 ರನ್ ಗಳಿಸಿ ಅಜೇಯರಾಗಿ ಉಳಿದರು. ಅವರು ಚೆಂಡಿನಲ್ಲಿ ಬೌಂಡರಿ ಬಾರಿಸಿದ್ದರು. ಈ ಮೂಲಕ ಪಂಜಾಬ್ 15.1 ಓವರ್‌ಗಳಲ್ಲಿ 5 ವಿಕೆಟ್‌ ಕಳೆದುಕೊಂಡು ಗುರಿ ತಲುಪಿತು. ಹೈದರಾಬಾದ್ ಪರ ಬೌಲಿಂಗ್ ಮಾಡುವ ವೇಳೆ ಫಾರೂಕಿ 4 ಓವರ್ ಗಳಲ್ಲಿ 32 ರನ್ ನೀಡಿ 2 ವಿಕೆಟ್ ಪಡೆದರು. ವಾಷಿಂಗ್ಟನ್ ಸುಂದರ್ 2 ಓವರ್ ಗಳಲ್ಲಿ 19 ರನ್ ನೀಡಿ ಒಂದು ವಿಕೆಟ್ ಪಡೆದರು. ಉಮ್ರಾನ್ ಮಲಿಕ್ 2.1 ಓವರ್ ಗಳಲ್ಲಿ 24 ರನ್ ನೀಡಿ ಒಂದು ವಿಕೆಟ್ ಪಡೆದರು. ಜಗದೀಶ ಕೂಡ ಯಶಸ್ಸು ಕಂಡಿದ್ದಾರೆ.

ಸನ್ ರೈಸರ್ಸ್ ಹೈದರಾಬಾದ್ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 157 ರನ್ ಗಳಿಸಿತು. ಅಭಿಷೇಕ್ ಶರ್ಮಾ ತಂಡದ ಪರ ಗರಿಷ್ಠ 43 ರನ್ ಗಳಿಸಿದರು. 32 ಎಸೆತಗಳಲ್ಲಿ 5 ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ 43 ರನ್ ಗಳಿಸಿದರು. ವಾಷಿಂಗ್ಟನ್ ಸುಂದರ್ 19 ಎಸೆತಗಳಲ್ಲಿ 3 ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದ 25 ರನ್ ಗಳಿಸಿದರು. ಶೆಫರ್ಡ್ 26 ರನ್‌ಗಳ ಮಹತ್ವದ ಕೊಡುಗೆ ನೀಡಿದರು. 15 ಎಸೆತಗಳಲ್ಲಿ 2 ಬೌಂಡರಿ ಹಾಗೂ 2 ಸಿಕ್ಸರ್‌ ಸಿಡಿಸಿದರು. (ಏಜೆನ್ಸೀಸ್,ಎಸ್.ಎಚ್)

Leave a Reply

comments

Related Articles

error: