ಕರ್ನಾಟಕಪ್ರಮುಖ ಸುದ್ದಿಮನರಂಜನೆ

ಯೋಗರಾಜ್ ಭಟ್ ನಿರ್ದೇಶನದಲ್ಲಿ ಶಿವಣ್ಣ ಮತ್ತು ಪ್ರಭುದೇವ ಜುಗಲ್ ಬಂದಿ

ರಾಜ್ಯ(ಬೆಂಗಳೂರು),ಮೇ.23 : ಯೋಗರಾಜ್ ಭಟ್ ನಿರ್ದೇಶನದಲ್ಲಿ ಸದ್ಯದಲ್ಲೇ ಮೂಡಿ ಬರಲಿರುವ ಹೊಸ ಸಿನಿಮಾದಲ್ಲಿ ಶಿವರಾಜ್ ಕುಮಾರ್ ಮತ್ತು ಪ್ರಭುದೇವ ನಟಿಸುತ್ತಿದ್ದು, ಈ ಚಿತ್ರವನ್ನು ರಾಕ್ ಲೈನ್ ವೆಂಕಟೇಶ್ ನಿರ್ಮಾಣ ಮಾಡಲಿದ್ದಾರೆ.

ಈ ಸಿನಿಮಾದ ಬಗ್ಗೆ ಹೆಚ್ಚಿನ ಮಾಹಿತಿ ಇರದೇ ಇದ್ದರೂ, ಯೋಗರಾಜ್ ಭಟ್ ಅವರು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಒಂದಷ್ಟು ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಸದ್ಯದಲ್ಲೇ ಈ ಸಿನಿಮಾಗೆ ಚಾಲನೆ ಸಿಗಲಿದೆ ಎಂದು ಕುತೂಹಲ ಮೂಡಿಸಿದ್ದಾರೆ. ಅಲ್ಲದೇ ಶಿವರಾಜ್ ಕುಮಾರ್ ಮನೆಯಲ್ಲಿ ಎಲ್ಲರೂ ಭೇಟಿಯಾದ ಫೋಟೋವನ್ನು ಅವರು ಹಂಚಿಕೊಂಡಿದ್ದಾರೆ.

ಸದ್ಯ ಯೋಗರಾಜ್ ಭಟ್ ಗರಡಿ ಸಿನಿಮಾದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದು, ಅ‍ಲ್ಲದೇ ಇವರ ನಿರ್ದೇಶನದ ಗಾಳಿಪಟ 2 ಸಿನಿಮಾ ರಿಲೀಸ್ ಆಗಬೇಕಿದೆ. ಶಿವರಾಜ್ ಕುಮಾರ್ ಕೂಡ ತಮ್ಮದೇ ನಿರ್ಮಾಣದ ವೇದ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಎರಡೂ ಸಿನಿಮಾಗಳ ಕೆಲಸಗಳ ಮುಂದಿನ ತಿಂಗಳು ಮಧ್ಯಕ್ಕೆ ಒಂದು ಹಂತಕ್ಕೆ ಬರುವುದರಿಂದ ಜೂನ್ ನಲ್ಲಿ ಹೊಸ ಸಿನಿಮಾದ ಶೂಟಿಂಗ್ ಶುರುವಾಗಲಿದೆ ಎನ್ನಲಾಗುತ್ತಿದೆ.

ಶಿವರಾಜ್ ಕುಮಾರ್ ಮತ್ತು ಪ್ರಭುದೇವ ಕಾಂಬಿನೇಷನ್ ಸಿನಿಮಾ ಇದಾಗಿದ್ದರಿಂದ ಹೊಸ ರೀತಿಯ ಕಥೆಗಳನ್ನೇ ಯೋಗರಾಜ್ ಭಟ್ ಬರೆದಿದ್ದಾರಂತೆ. ಇದೊಂದು ಸಾಹಸ ಪ್ರಧಾನ ಸಿನಿಮಾವಾಗಿದ್ದು, ನೃತ್ಯಕ್ಕೂ ಪ್ರಾಧಾನ್ಯತೆ ನೀಡಲಾಗಿದೆಯಂತೆ.(ಎಸ್.ಎಂ)

Leave a Reply

comments

Related Articles

error: