ಕರ್ನಾಟಕಪ್ರಮುಖ ಸುದ್ದಿ

ಪಿ.ಎಂ.ಕಿಸಾನ್ ನೊಂದಾಯಿತ ರೈತರು ಇ-ಕೆವೈಸಿ ಹೆಸರು ನೋಂದಾಯಿಸಿ

ರಾಜ್ಯ(ಮಡಿಕೇರಿ) ಮೇ.26:-ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕೆಐಎಸ್‍ಎಎನ್) ಯೋಜನೆಯಡಿ ರೈತರ ಆದಾಯ ವೃದ್ಧಿಸಲು ಜಿಲ್ಲೆಯ ಎಲ್ಲಾ ರೈತ ಕುಟುಂಬಗಳಿಗೆ ಪ್ರತಿ ವರ್ಷ 6 ಸಾವಿರ ರೂ. ಪ್ರತಿ 4 ತಿಂಗಳಿಗೊಮ್ಮೆಯಂತೆ ಒಟ್ಟು 3 ಸಮಾನ ಕಂತುಗಳಲ್ಲಿ ರೈತರ ಖಾತೆಗೆ ಜಮೆ ಮಾಡಲಾಗುತ್ತಿದೆ. ಜಿಲ್ಲೆಯ ಸುಮಾರು 49582 ಜನ ನೋಂದಣಿಯಾಗಿದ್ದು, ಈಗಾಗಲೇ ನೇರ ಆರ್ಥಿಕ ನೆರವು ವರ್ಗಾವಣೆ ಚಾಲ್ತಿಯಲ್ಲಿರುತ್ತದೆ. ಈ ಸಂಬಂಧ ಈ ಯೋಜನೆಯ ನೆರವು ಆರ್ಹ ಫಲಾನುಭವಿಗಳಿಗೆ ದೊರಕುತ್ತಿರುವುದನ್ನು ಖಾತ್ರಿ ಪಡಿಸಿಕೊಳ್ಳಲು ಇ-ಕೆವೈಸಿ ಮಾಡುವುದು ಅತ್ಯಂತ ಅವಶ್ಯಕವಾಗಿರುತ್ತದೆ. ಇ-ಕೆವೈಸಿಯನ್ನು ಎರಡು ವಿಧಾನಗಳಲ್ಲಿ ಕೈಗೊಳ್ಳಬಹುದಾಗಿರುತ್ತದೆ.
ರೈತರು http://pmkisan.gov.in ಪೋರ್ಟಲ್‍ನ ಫಾರ್ಮರ್ ಕಾರ್ನರ್‍ನ ಇ-ಕೆವೈಸಿ ಅವಕಾಶದಡಿ ರೈತನ (ಈಗಾಗಲೇ ಪಿಎಂಕಿಸಾನ್ ಯೋಜನೆಯಡಿ ಫಲಾನುಭವಿಗಳಾಗಿರುವ ಪ್ರತಿಯೊಬ್ಬ) ಆಧಾರ್ ಸಂಖ್ಯೆಯನ್ನು ನಂತರ ಆಧಾರ್ ಸಂಖ್ಯೆಯೊಂದಿಗೆ ನೋಂದಣಿಯಾಗಿರುವ ಮೊಬೈಲ್ ಸಂಖ್ಯೆಯನ್ನು ದಾಖಲಿಸಬೇಕು. ನಂತರ ಮೊಬೈಲ್‍ಗೆ ಒಟಿಪಿ ಯು ರವಾನೆಯಾಗುತ್ತದೆ. ಹೀಗೆ ಸ್ವೀಕರಿಸಿದ ಒಟಿಪಿಯನ್ನು ಪೋರ್ಟಲ್‍ನಲ್ಲಿ ದಾಖಲಿಸಿ “SUBMIT FOR AUTH” ಎಂಬ ಬಟನ್ ಒತ್ತಬೇಕು. ಆಗ ತಂತ್ರಾಂಶ ಆಧಾರಿತ ಪರಿಶೀಲನೆ ನಡೆದು e-KYC is “successfully submitted” ಎಂಬ ವಾಕ್ಯವು ಗೋಚರಿಸುತ್ತದೆ. ಹೀಗೆ ಮೊಬೈಲ್ ಒಟಿಪಿ ಆಧಾರಿತವಾಗಿ ಫಲಾನುಭವಿಯು ಖುದ್ದಾಗಿ ಇ-ಕೆವೈಸಿ ಮಾಡಬಹುದಾಗಿದೆ. (ಈಗಾಗಲೇ ಇ-ಕೆವೈಸಿ ಆಗಿದ್ದರೆ. “e-KYC already done” ಎಂಬ ಮಾಹಿತಿ ಗೋಚರಿಸುತ್ತದೆ).
ಯಾವ ಫಲಾನುಭವಿಯು ಮೊಬೈಲ್ ಸಂಖ್ಯೆ ಆಧಾರ್ ಸಂಖ್ಯೆಯೊಂದಿಗೆ ಜೋಡಣೆಯಾಗಿರುವುದಿಲ್ಲವೋ ಅಥವಾ ಯಾರ ಮೊಬೈಲ್ ಸಂಖ್ಯೆಗೆ ಇ-ಕೆವೈಸಿ ಗಾಗಿ ಕಳುಹಿಸಿದ ಒಟಿಪಿಯು ಸ್ವೀಕೃತವಾಗುದಿಲ್ಲವೋ ಅವರು ನಾಗರಿಕ ಸೇವಾ ಕೇಂದ್ರಗಳಿಗೆ ತೆರಳಿ ಅಲ್ಲಿ ಬಯೋಮೆಟ್ರಿಕ್ ಆಧಾರಿತವಾಗಿ ಇ-ಕೆವೈಸಿ ಮಾಡಬಹುದಾಗಿರುತ್ತದೆ. ಅಲ್ಲಿ ಕೈಬೆರಳಿನ ಗುರುತು ಆಧಾರದ ಮೇಲೆ ಇ-ಕೆವೈಸಿ ಮಾಡಬಹುದಾಗಿದೆ.
ವಿಶೇಷ ಸೂಚನೆ: ಈ ಯೋಜನೆಯ ಪ್ರತಿ ಫಲಾನುಭವಿ ರೈತರು, ಕೇಂದ್ರ ಸರ್ಕಾರವು ಮುಂದಿನ ಕಂತಿನಲ್ಲಿ ನೀಡುವ ಆರ್ಥಿಕ ನೆರವು ಪಡೆಯಲು 31 ನೇ ಜುಲೈ 2022 ರೊಳಗೆ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ.
ಹೆಚ್ಚಿನ ಮಾಹಿತಿಗೆ ರೈತರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ನಾಗರಿಕ ಸೇವಾ ಕೇಂದ್ರ ಗಳನ್ನು ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರಾದ ಶಬಾನಾ ಎಂ.ಶೇಕ್ ಅವರು ತಿಳಿಸಿದ್ದಾರೆ. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: