ಕರ್ನಾಟಕಪ್ರಮುಖ ಸುದ್ದಿ

ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ

ರಾಜ್ಯ(ಮಡಿಕೇರಿ) ಮೇ.27:-ಪ್ರಸಕ್ತ(2022-23) ಸಾಲಿನಲ್ಲಿ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯನ್ನು ಕೊಡಗು ಜಿಲ್ಲೆಯ ಎಲ್ಲಾ 3 ತಾಲೂಕುಗಳಲ್ಲಿ ಜಿಲ್ಲೆಯ ಮುಖ್ಯ ಬಹುವಾರ್ಷಿಕ ಬೆಳೆಗಳಾದ ಕಾಳು ಮಣಸು ಹಾಗೂ ಅಡಿಕೆ ಬೆಳೆಗಳಿಗೆ ಅನುಷ್ಠಾನಗೊಳಿಸಲಾಗುವುದು.
ಹವಾಮಾನ ಅಂಶಗಳಾದ ಮಳೆಯ ಪ್ರಮಾಣ, ತಾಪಮಾನ ಆರ್ದತೆ ಮತ್ತಿತರ ಮಾಹಿತಿಗಳನ್ನು ಸ್ಥಳೀಯವಾಗಿ ಲಭ್ಯವಿರುವ ಟೆಲಿಮೆಟ್ರಿಕ್ ಮಳೆ ಮಾಪನ ಕೇಂದ್ರಗಳಲ್ಲಿ ದಾಖಲಿಸುವ ಅಂಶಗಳ ಆಧಾರದ ಮೇಲೆ ಬೆಳೆ ವಿಮೆ ನಷ್ಟವನ್ನು ತೀರ್ಮಾನಿಸಲಾಗುವುದು. ಈ ಯೋಜನೆಯ ವಿಮೆ ನೊಂದಣಿಗೆ ಜೂನ್, 30 ಕೊನೆಯ ದಿನವಾಗಿದೆ.
2022-23ನೇ ಸಾಲಿನಲ್ಲಿ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಬೆಳೆವಾರು ವಿಮಾ ಮೊತ್ತ ಹಾಗೂ ಕಂತಿನ ವಿವರ ಇಂತಿದೆ. ಪ್ರತಿ ಹೆಕ್ಟೇರ್ ಗೆ ವಿಮಾ ಮೊತ್ತ (ರೂ. ಗಳಲ್ಲಿ) ಕಾಳು ಮೆಣಸು 47 ಸಾವಿರ, ಅಡಿಕೆಗೆ ರೂ.1,28,000, ಪ್ರತಿ ಹೆಕ್ಟೇರ್‍ಗೆ ವಿಮಾ ಕಂತು(ಶೇ.30) ಕಾಳು ಮೆಣಸಿಗೆ 14,100 ಮತ್ತು ಅಡಿಕೆಗೆ 38,400 ಹಾಗೂ ರೈತರು ಪಾವತಿಸಬೇಕಾಗಿರುವ ಕಂತು(ಶೇ.5) ಕಾಳು ಮೆಣಸಿಗೆ 2,350 ಮತ್ತು ಅಡಿಕೆಗೆ 6,400 ಆಗಿರುತ್ತದೆ. ಹೆಚ್ಚಿನ ಮಾಹಿತಿಗೆ ರೈತರು ಕೂಡಲೇ ಸಮೀಪದ ಬ್ಯಾಂಕ್ ಶಾಖೆ ಅಥವಾ ಎಸ್‍ಬಿಐ ಜನರಲ್ ಇನ್ಸೂರೆನ್ಸ್ (ಶುಲ್ಕ ರಹಿತ ಪೆÇೀನ್ ನಂ. 18002091111 ಆಥವಾ ಶರತ್ 9902302867) ಅಥವಾ ತಾಲ್ಲೂಕಿನ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೆಶಕರು ಹಾಗೂ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಅಥವಾ ಸಾಮಾನ್ಯ ಸೇವಾ ಕೇಂದ್ರಗಳನ್ನು (ಸಿಎಸ್‍ಸಿ) ಸಂಪರ್ಕಿಸುವಂತೆ ತೋಟಗಾರಿಕೆ ಉಪ ನಿರ್ದೇಶಕರಾದ ಪ್ರಮೋದ್ ಅವರು ಕೋರಿದ್ದಾರೆ. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: