
ಕ್ರೀಡೆದೇಶಪ್ರಮುಖ ಸುದ್ದಿ
ಐಸಿಸಿ ಟೆಸ್ಟ್ ರ್ಯಾಂಕಿಂಗ್ : ಅಗ್ರ ಹತ್ತರಲ್ಲಿ ಮೂವರು ಭಾರತೀಯರು !
ದೇಶ(ನವದೆಹಲಿ),ಮೇ.26:- ಬಾಂಗ್ಲಾದೇಶ ಮತ್ತು ಶ್ರೀಲಂಕಾ ನಡುವಿನ ಟೆಸ್ಟ್ ಪಂದ್ಯದ ನಂತರ ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಬ್ಯಾಟ್ಸ್ಮನ್ ಗಳ ಇತ್ತೀಚಿನ ರ್ಯಾಂಕಿಂಗ್ ನ್ನು ಬಿಡುಗಡೆ ಮಾಡಿದೆ.
ಬಾಂಗ್ಲಾದೇಶದ ಲಿಟನ್ ದಾಸ್ ಮತ್ತು ಶ್ರೀಲಂಕಾದ ಅನುಭವಿ ಏಂಜೆಲೊ ಮ್ಯಾಥ್ಯೂಸ್ ಎರಡು ತಂಡಗಳ ನಡುವಿನ ಮೊದಲ ಟೆಸ್ಟ್ ಡ್ರಾದಲ್ಲಿ ಪ್ರಭಾವಿ ಪ್ರದರ್ಶನದ ಹಿನ್ನೆಲೆಯಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ನ ಇತ್ತೀಚಿನ ಪುರುಷರ ಟೆಸ್ಟ್ ಶ್ರೇಯಾಂಕದಲ್ಲಿ ಲಾಭ ಗಳಿಸಿದ್ದಾರೆ, ಆದರೆ ಅಗ್ರ 10 ಆಟಗಾರರ ಶ್ರೇಯಾಂಕಗಳು ಬದಲಾಗದೆ ಉಳಿದಿವೆ.
ಬ್ಯಾಟ್ಸ್ಮನ್ಗಳ ಪಟ್ಟಿಯಲ್ಲಿ ಮಾರ್ನಸ್ ಲ್ಯಾಬುಸ್ಚಾಗ್ನೆ ಅಗ್ರಸ್ಥಾನದಲ್ಲಿ ಮುಂದುವರಿದರೆ, ಭಾರತದ ನಾಯಕ ರೋಹಿತ್ ಶರ್ಮಾ ಮತ್ತು ಮಾಜಿ ನಾಯಕ ವಿರಾಟ್ ಕೊಹ್ಲಿ ಕ್ರಮವಾಗಿ ಎಂಟು ಮತ್ತು 10 ನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಮತ್ತೊಂದೆಡೆ ಬೌಲಿಂಗ್ ಪಟ್ಟಿಯಲ್ಲಿ ಪ್ಯಾಟ್ ಕಮಿನ್ಸ್ (901 ಅಂಕ) ಎರಡನೇ ಸ್ಥಾನದಲ್ಲಿರುವ ರವಿಚಂದ್ರನ್ ಅಶ್ವಿನ್ ಗಿಂತ 51 ಪಾಯಿಂಟ್ ಗಳ ಮುನ್ನಡೆ ಹೊಂದಿದ್ದರೆ, ಭಾರತದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಮೂರನೇ ಸ್ಥಾನದಲ್ಲಿದ್ದಾರೆ.
ಆಲ್ ರೌಂಡರ್ ಗಳ ಪಟ್ಟಿಯಲ್ಲಿ ಭಾರತದ ರವೀಂದ್ರ ಜಡೇಜಾ ಅಗ್ರಸ್ಥಾನದಲ್ಲಿ ಮುಂದುವರಿದಿದ್ದಾರೆ. (ಏಜೆನ್ಸೀಸ್,ಎಸ್.ಎಚ್)