ದೇಶಪ್ರಮುಖ ಸುದ್ದಿ

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2628 ಹೊಸ ಕೊರೋನಾ ಪ್ರಕರಣ ಪತ್ತೆ

ದೇಶ(ನವದೆಹಲಿ),ಮೇ.26:- ದೇಶಾದ್ಯಂತ ಕೊರೊನಾ ಹೊಸ ಅಂಕಿ ಅಂಶಗಳು ಬಿಡುಗಡೆಯಾಗಿವೆ. ಆರೋಗ್ಯ ಸಚಿವಾಲಯದ ಪ್ರಕಾರ ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಒಟ್ಟು 2628 ಹೊಸ ಕೊರೋನಾ ಪ್ರಕರಣಗಳು ದಾಖಲಾಗಿವೆ.
ಅದೇ ವೇಳೆ ಕೊರೊನಾ ಸೋಂಕಿನಿಂದ ಒಂದೇ ದಿನದಲ್ಲಿ 18 ಮಂದಿ ಸಾವನ್ನಪ್ಪಿದ್ದಾರೆ. ಈ ಅಂಕಿ ಅಂಶಗಳ ಪ್ರಕಾರ ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ ಮತ್ತೊಮ್ಮೆ 15 ಸಾವಿರ ದಾಟಿದೆ. ಕಳೆದ ಕೆಲವು ದಿನಗಳಿಗೆ ಹೋಲಿಸಿದರೆ ಮೇ 26 ರಂದು ಹೆಚ್ಚು ಕೊರೋನಾ ಪ್ರಕರಣಗಳು ದಾಖಲಾಗಿವೆ.
ಸಚಿವಾಲಯ ಬಿಡುಗಡೆ ಮಾಡಿದ ಅಂಕಿ ಅಂಶಗಳ ಪ್ರಕಾರ ಭಾರತದಲ್ಲಿ ಕೊರೊನಾ ಚೇತರಿಕೆ ಪ್ರಮಾಣ 98.75 ಪ್ರತಿಶತ. ಮತ್ತೊಂದೆಡೆ ದೇಶದಲ್ಲಿ 0.58% ದೈನಂದಿನ ಧನಾತ್ಮಕ ದರವಿದೆ. ಕಳೆದ 24 ಗಂಟೆಗಳಲ್ಲಿ ಒಟ್ಟು 2167 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ 84 ಕೋಟಿಗೂ ಹೆಚ್ಚು ಕೊರೋನಾ ಪರೀಕ್ಷೆಗಳನ್ನು ಮಾಡಲಾಗಿದೆ. ಕಳೆದ 24 ಗಂಟೆಗಳಲ್ಲಿ 4 ಲಕ್ಷ 52 ಸಾವಿರಕ್ಕೂ ಹೆಚ್ಚು ಪರೀಕ್ಷೆಗಳನ್ನು ಮಾಡಲಾಗಿದೆ. (ಏಜೆನ್ಸೀಸ್,ಎಸ್.ಎಚ್)

Leave a Reply

comments

Related Articles

error: