ಮೈಸೂರು

ವಿವಾದಿತ ಪಠ್ಯ ಕೈಬಿಡುವಂತೆ ಒತ್ತಾಯಿಸಿ ಪ್ರತಿಭಟನೆ

ಮೈಸೂರು,ಮೇ.26:-  ಪಠ್ಯಪುಸ್ತಕ ಪರಿಷ್ಕರಣೆ ವಿಚಾರಕ್ಕೆ ಸಂಬಂಧಿಸಿದಂತೆ ವಿವಾದಿತ ಪಠ್ಯ ಕೈಬಿಡುವಂತೆ ಒತ್ತಾಯಿಸಿ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಪ್ರತಿಭಟನೆ ನಡೆಸಿತು.

ಕಾಂಗ್ರೆಸ್ ಭವನದ ಎದುರು ಇಂದು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು   ರಾಜ್ಯ ಸರ್ಕಾರದ ನಡೆಗೆ ಆಕ್ರೋಶ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳ ಮನಸಿನಲ್ಲಿ ಕೋಮುವಾದ ಬಿತ್ತುವ ಕಾರ್ಯವಾಗುತ್ತಿದೆ. ಪಠ್ಯ ಪುಸ್ತಕವನ್ನು ಕೇಸರಿಕರಣ ಮಾಡುವ ಹುನ್ನಾರ ಇದಾಗಿದೆ. ಬಿಜೆಪಿ ಸರ್ಕಾರ ಇಂತಹ ವಿವಾದಿತ ಪಠ್ಯವನ್ನು ಕೈಬಿಡಬೇಕು ಎಂದು   ಒತ್ತಾಯಿಸಿದರು. (ಕೆ.ಎಸ್,ಎಸ್.ಎಚ್)

 

 

Leave a Reply

comments

Related Articles

error: