ಕರ್ನಾಟಕದೇಶಪ್ರಮುಖ ಸುದ್ದಿ
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಮತ್ತೊಮ್ಮೆ ಇಡಿ ಶಾಕ್
ನವದೆಹಲಿ/ಬೆಂಗಳೂರು,ಮೇ.26:- ಜಾರಿ ನಿರ್ದೇಶನಾಲಯ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ವಿರುದ್ಧ ಗುರುವಾರ ಆರೋಪಪಟ್ಟಿ ದಾಖಲಿಸಿದೆ. ಈ ಮೂಲಕ ಇಡಿ ಮತ್ತೊಮ್ಮೆ ಡಿ ಕೆ ಶಿವಕುಮಾರ್ ಗೆ ಶಾಕ್ ಕೊಟ್ಟಿದೆ.
ಅಕ್ರಮ ಹಣ ವರ್ಗಾವಣೆ ಕೇಸಿನಲ್ಲಿ ಡಿ ಕೆ ಶಿವಕುಮಾರ್ ಮತ್ತು ಇತರರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಆದಾಯ ತೆರಿಗೆ ಇಲಾಖೆ ನೀಡಿದ ದೂರಿನ ಆಧಾರದ ಮೇಲೆ ಇಡಿ ದಾಖಲಿಸಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಶಿವಕುಮಾರ್ ಸದ್ಯ ಜಾಮೀನಿನ ಮೇಲೆ ಇದ್ದಾರೆ.
2019ರಲ್ಲಿ ಅಕ್ರಮ ಹಣ ವರ್ಗಾವಣೆ ಕೇಸಿಗೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ದೆಹಲಿಯಲ್ಲಿ ಡಿ ಕೆ ಶಿವಕುಮಾರ್ ಅವರನ್ನು ಬಂಧಿಸಿದ್ದರು. 50 ದಿನಗಳ ಕಾಲ ದೆಹಲಿಯ ತಿಹಾರ್ ಜೈಲಿನಲ್ಲಿದ್ದು ನಂತರ ದೆಹಲಿ ಹೈಕೋರ್ಟ್ ನಿಂದ ಜಾಮೀನು ಮೇಲೆ ಹೊರಬಂದಿದ್ದರು.