ಕರ್ನಾಟಕಪ್ರಮುಖ ಸುದ್ದಿ
ಮೇ, 28 ರಂದು ಅಮೃತ ಭಾರತಿಗೆ ಕನ್ನಡದ ಆರತಿ ಕಾರ್ಯಕ್ರಮ
ರಾಜ್ಯ(ಮಡಿಕೇರಿ )ಮೇ.27:-ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಮೇ, 28 ರಂದು ಬೆಳಗ್ಗೆ 11 ಗಂಟೆಗೆ ನಗರದ ಕ್ರಿಸ್ಟಲ್ ಕೋರ್ಟ್ನಲ್ಲಿ ಅಮೃತ ಭಾರತಿಗೆ ಕನ್ನಡದ ಆರತಿ ಅಭಿಯಾನದ ಸಭಾ ಕಾರ್ಯಕ್ರಮ ನಡೆಯಲಿದೆ.
ಮೇ, 28 ರಂದು ಬೆಳಗ್ಗೆ 9.30 ಗಂಟೆಗೆ ನಗರದ ಗಾಂಧಿ ಮೈದಾನದಲ್ಲಿರುವ ಗಾಂಧಿ ಪ್ರತಿಮೆಗೆ ಗಣ್ಯರಿಂದ ಪುಷ್ಪಾರ್ಚನೆ ನೆರವೇರಿಸಿ, ವಿವಿಧ ಜಾನಪದ ಕಲಾತಂಡಗಳೊಂದಿಗೆ ಗದ್ದಿಗೆಯಿಂದ ಮೆರವಣಿಗೆ ಪ್ರಾರಂಭವಾಗಿ ನಗರದ ಪ್ರಮುಖ ಬೀದಿಗಳಲ್ಲಿ ಸಾಗಿ ಕ್ರಿಸ್ಟಲ್ ಕೋರ್ಟ್ ಸಭಾಂಗಣದಲ್ಲಿ ಸಮಾವೇಶಗೊಳ್ಳಲಾಗುತ್ತದೆ.
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ನಾಗೇಶ್ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷರು ಹಾಗೂ ಶಾಸಕರಾದ ಕೆ.ಜಿ.ಬೋಪಯ್ಯ, ಕರ್ನಾಟಕ ರಾಜ್ಯ ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆ ಸಮಿತಿ ಅಧ್ಯಕ್ಷರಾದ ರವಿಕುಶಾಲಪ್ಪ, ಸಂಸದರಾದ ಪ್ರತಾಪ್ಸಿಂಹ, ಶಾಸಕರಾದ ವೀಣಾ ಅಚ್ಚಯ್ಯ, ಎಸ್.ಲ್.ಬೋಜೇಗೌಡ, ಸುಜಾ ಕುಶಾಲಪ್ಪ, ಆಯನೂರು ಮಂಜುನಾಥ, ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಸಾಮಾಜಿಕ ಕಾರ್ಯಕರ್ತರಾದ ಸಿ.ಆರ್.ಪ್ರೇಮ್ ಕುಮಾರ್, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ.ಅಯ್ಯಪ್ಪ, ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ ಇತರರು ಪಾಲ್ಗೊಳ್ಳಲಿದ್ದಾರೆ. (ಜಿ.ಕೆ,ಎಸ್.ಎಚ್)