ಕರ್ನಾಟಕಪ್ರಮುಖ ಸುದ್ದಿ

ಇಂದು ಗಡಿ ಜಿಲ್ಲೆ ಬೀದರ್ ನಲ್ಲಿ ಗೃಹಸಚಿವರ ಗ್ರಾಮ ವಾಸ್ತವ್ಯ

ರಾಜ್ಯ(ಬೀದರ್),ಮೇ.27 : ಗಡಿ ಜಿಲ್ಲೆ ಬೀದರ್ ನ ಔರಾದ್ ತಾಲೂಕಿನ ವಡಗಾಂವ್ ಗ್ರಾಮದಲ್ಲಿಂದು ರಾತ್ರಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯದಲ್ಲಿ ಕಂದಾಯ ಸಚಿವ ಆರ್ ಅಶೋಕ್ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ.

ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮದಲ್ಲಿಂದು ಗೃಹ ಸಚಿವರು ಭಾಗಿಯಾಗಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಸಾವಿರಾರು ಜನರ ಅಹವಾಲುಗಳನ್ನು ಸ್ವೀಕಾರ ಮಾಡಲಿದ್ದಾರೆ. ಈಗಾಗಲೇ ಅವರನ್ನು ಅದ್ದೂರಿಯಾಗಿ ಸ್ವಾಗತ ಮಾಡಲಿಕ್ಕೆ ಕಲಾ ತಂಡಗಳು, ಅಲಂಕೃತ ಎತ್ತಿನ ಬಂಡಿ ಸಿದ್ದವಾಗಿವೆ.

ಜಿಲ್ಲೆಯಾದ್ಯಂತ 25 ಸಾವಿರ ಜನರು ಈ ಕಾರ್ಯಕ್ರಮದಲ್ಲಿ ಸೇರುವ ನಿರೀಕ್ಷೆಯಿದೆ. ಆರ್.ಅಶೋಕ್ ಅವರ ಅಷ್ಟೇ ಅಲ್ಲದೇ ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಸರಿಗಮಪ ಖ್ಯಾತಿಯ ಹನುಮಂತ ಲಂಬಾಣಿಯಿಂದ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಿಕೊಡಲಾಗುತ್ತಿದೆ.(ಎಸ್.ಎಂ)

Leave a Reply

comments

Related Articles

error: