ಕರ್ನಾಟಕಪ್ರಮುಖ ಸುದ್ದಿ

ಕಾರು ಮತ್ತು ಲಾರಿ ನಡುವೆ ಭೀಕರ ರಸ್ತೆ ಅಪಘಾತ : ಸ್ಥಳದಲ್ಲೇ ನಾಲ್ವರ ಸಾವು

ರಾಜ್ಯ(ಬೆಳಗಾವಿ),ಮೇ.27 : ಕಾರು ಮತ್ತು ಲಾರಿ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಓರ್ವ ಮಹಿಳೆ ಸೇರಿ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ನಿಪ್ಪಾಣಿಯ ಸ್ಥವನಿಧಿ ಘಾಟ್ ಬಳಿ ನಡೆದಿದೆ.

ಸ್ಥಳಕ್ಕೆ ನಿಪ್ಪಾಣಿ ಶಹರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ ನಾಲ್ಕರ ಮೇಲೆ ನಡೆದ ಅಪಘಾತ ಇದಾಗಿದ್ದು, ಕಾರಿನಲ್ಲಿದ್ದ ಶವ ಹೊರ ತೆಗೆಯಲು ಪೊಲೀಸರು ಹರಸಾಹಸ ಮಾಡಿದ್ದಾರೆ.

ಮೃತರೆಲ್ಲರೂ ಸಹ ನಿಪ್ಪಾಣಿ ನಗರದವರೆಂದು ಪೊಲೀಸರು ಪ್ರಾಥಮಿಕ ತನಿಖೆಯ ನಂತರ ಮಾಹಿತಿ ನೀಡಿದ್ದಾರೆ.(ಎಸ್.ಎಂ)

Leave a Reply

comments

Related Articles

error: