ಕರ್ನಾಟಕಪ್ರಮುಖ ಸುದ್ದಿ
ಮೇ, 30 ರಂದು ಕೆಎಸ್ಐಐಡಿಸಿ ವ್ಯವಸ್ಥಾಪಕ ನಿರ್ದೇಶಕರ ಜಿಲ್ಲಾ ಪ್ರವಾಸ
ರಾಜ್ಯ(ಮಡಿಕೇರಿ) ಮೇ.28:-ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರಾದ ಡಾ.ಎಂ.ಆರ್.ರವಿ ಅವರು ಮೇ, 30 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ವ್ಯವಸ್ಥಾಪಕ ನಿರ್ದೇಶಕರು ಮೇ, 30 ರಂದು ಬೆಳಗ್ಗೆ 10.30 ಗಂಟೆಗೆ ಕೊಡಗು ಜಿಲ್ಲೆಯ ಕುಶಾಲನಗರ ಬಳಿ ಹೆಲಿಪೋರ್ಟ್ ಅಭಿವೃದ್ಧಿಪಡಿಸುವ ಬಗ್ಗೆ ಕುಶಾಲನಗರ ತಾಲ್ಲೂಕು ಚಿಕ್ಕತ್ತೂರು ಗ್ರಾಮದ ಜಮೀನುಗಳ ಪರಿವೀಕ್ಷಣೆ ಮಾಡಲಿದ್ದಾರೆ. ನಂತರ ಮಧ್ಯಾಹ್ನ 12.30 ಗಂಟೆಗೆ ಪರಿವೀಕ್ಷಣೆ ಹಾಗೂ ಹೆಲಿಪೋರ್ಟ್ ಅಭಿವೃದ್ಧಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ಸಭೆ ನಡೆಸಲಿದ್ದಾರೆ ಎಂದು ಕೆಎಸ್ಐಐಡಿಸಿ ಕಾರ್ಯನಿರ್ವಾಹಕ ಸಹಾಯಕರಾದ ಎಂ.ಮಲ್ಲೇಶಪ್ಪ ಅವರು ತಿಳಿಸಿದ್ದಾರೆ. (ಜಿ.ಕೆ,ಎಸ್.ಎಚ್)