ಕರ್ನಾಟಕಪ್ರಮುಖ ಸುದ್ದಿ

ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ

ರಾಜ್ಯ(ಶಿವಮೊಗ್ಗ) ಮೇ 28 :-  ಶಿವಮೊಗ್ಗ ಜಿಲ್ಲಾಧಿಕಾರಿಗಳು ಹೊಸನಗರ ತಾಲೂಕು ಕೆರೆಹಳ್ಳಿ ಹೋಬಳಿ ಬೆಳ್ಳೂರು ಗ್ರಾಮದಲ್ಲಿ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ” ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಬೆಳ್ಳೂರು ಗ್ರಾಮ ಪಂಚಾಯತ್ ಜನಪ್ರತಿನಿಧಿಗಳು ಹಾಗೂ ಗ್ರಾಮಸ್ಥರೊಂದಿಗೆ ಸಭೆ ನಡೆಸಿ ಕುಂದು ಕೊರತೆಯ ಅರ್ಜಿ ಸ್ವೀಕರಿಸಿದರು.

ಗುಳಿ ಗುಳಿ ಶಂಕರ ದೇವಸ್ಥಾನಕ್ಕೆ ಭೇಟಿ ನೀಡಿ ಗ್ರಾಮದ ಅಭಿವೃದ್ಧಿ ಕುರಿತು ಗ್ರಾ.ಪಂ. ಚುನಾಯಿತ ಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಿದರು. ಪಶು ಆಸ್ಪತ್ರೆ, ಅಂಗನವಾಡಿ, ಸ.ಕಿ.ಪ್ರಾ.ಶಾಲೆ, ಸ.ಹಿ.ಪ್ರಾ.ಶಾಲೆಗಳಿಗೆ ಭೇಟಿ ನೀಡಿ ಪರಿಶೀಲಿಸಿದರು ಹಾಗೂ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ದೂಬೈಲು ಮತ್ತು ಮಸ್ತಾನಿ ಗ್ರಾಮಗಳಿಗೆ ಭೇಟಿ ನೀಡಿದರು. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: